ಇಸ್ರೇಲ್ ಮೇಲೆ ಹಮಾಸ್ ಗಾಂಜಾ ದಾಳಿ ಪ್ರಕರಣ : ಜಿಲ್ಲೆಯ ಪ್ರಜೆಗಳು ಸಿಲುಕಿದ್ದರೆ ಕಂಟ್ರೋಲ್ ರೂಂ ಗೆ ತಿಳಿಸುವಂತೆ ಉಡುಪಿ ಜಿಲ್ಲಾಡಳಿತ ಸೂಚನೆ – ಕಹಳೆ ನ್ಯೂಸ್
ಉಡುಪಿ : ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿ ಉಡುಪಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ, ಸಂಖ್ಯೆ: 1077/ 0820-2574802 ಗೆ ಹಾಗೂ ರಾಜ್ಯ ಸರಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಮಾಹಿತಿ ನೀಡುವಂತೆ ಉಡುಪಿ ಜಿಲ್ಲಾಡಳಿತ ಮನವಿ ಮಾಡಿದ್ದಾರೆ.