ಪುತ್ತೂರು: ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುರಿಯ ಪಡ್ಪುನಲ್ಲಿ ನಡೆದಿದೆ.
ನಗರದ ಕುರಿಯ ಪಡ್ಪು ನಿವಾಸಿಯಾಗಿರುವ ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿಕ್ಷೀತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.
ಈ ಬಗ್ಗೆ ಸಂಪ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.