ವಿಶ್ವಹಿಂದೂ ಪರಿಷತ್ತಿನ 60ನೇ ವರ್ಷಾಚರಣೆ ಪ್ರಯುಕ್ತ ದೇಶದಲ್ಲಿ ಬಜರಂಗದಳ ನೇತೃತ್ವದಲ್ಲಿ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದ್ದು, ಇದರ ಭಾಗವಾಗಿ ಕರ್ನಾಟಕ ದಕ್ಷಿಣ ಪ್ರಾಂತ ವತಿಯಿಂದ ಉಡುಪಿಯಲ್ಲಿ ಇಂದು ಬೃಹತ್ ಶೋಭಾಯಾತ್ರೆ, ಹಿಂದೂ ಸಮಾಜೋತ್ಸವ ನಡೆಯಲಿದೆ ಈ ಬಗ್ಗೆ ಭಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್. ಮಾಹಿತಿ ನೀಡಿದ್ದಾರೆ.
ವಿಶ್ವಹಿಂದೂ ಪರಿಷತ್ತಿನ 60ನೇ ವರ್ಷಾಚರಣೆ ಪ್ರಯುಕ್ತ ದೇಶದಲ್ಲಿ ಬಜರಂಗದಳ ನೇತೃತ್ವದಲ್ಲಿ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದ್ದು, ಇದರ ಭಾಗವಾಗಿ ಕರ್ನಾಟಕ ದಕ್ಷಿಣ ಪ್ರಾಂತ ವತಿಯಿಂದ ಉಡುಪಿಯಲ್ಲಿ ಬೃಹತ್ ಶೋಭಾಯಾತ್ರೆ, ಹಿಂದೂ ಸಮಾಜೋತ್ಸವ ನಡೆಯಲಿದೆ. ದಕ್ಷಿಣ ಪ್ರಾಂತ ರಥಯಾತ್ರೆ ಸೆ. 25ರಂದು ಚಿತ್ರದುರ್ಗದಿಂದ ಹೊರಟಿದ್ದು ಇಂದು ಉಡುಪಿಗೆ ಆಗಮಿಸಲಿದೆ. ಮಧ್ಯಾಹ್ನ ಹೆಜಮಾಡಿಯಲ್ಲಿ ಸ್ವಾಗತಿಸಿ, ಉಡುಪಿಯ ಜೋಡುಕಟ್ಟೆಯಿಂದ 2 ಗಂಟೆಗೆ ಶೌರ್ಯ ಜಾಗರಣದ ರಥಯಾತ್ರೆ ಆರಂಭವಾಗಲಿದೆ. ಶೋಭಾಯಾತ್ರೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಪುಣೆ ಸಾಮಾಜಿಕ ಮುಖಂಡ ಕಡ್ತಲ ವಿಶ್ವನಾಥ್ ಪೂಜಾರಿ ಉದ್ಘಾಟಿಸಲಿದ್ದಾರೆ. ಸಂಜೆ 4ಕ್ಕೆ ಎಂಜಿಎA ಮೈದಾನದಲ್ಲಿ ಸಮಾಜೋತ್ಸವ ಜರಗಲಿದ್ದು, ಮಧ್ಯಪ್ರದೇಶದ ಭೋಪಾಲದ ಮಹಾಮಂಡಲೇಶ್ವರ ಶ್ರೀಅಖಿಲೇಶ್ವರಾನಂದ ಗಿರಿ ಮಹಾರಾಜ್, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಸಾಯಿರಾಧ ಗ್ರೂಪ್ಸ್ ಎಂಡಿ ಮನೋಹರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್, ಬಜರಂಗದಳ ರಾಷ್ಟ್ರೀಯ ಸಹ ಸಂಯೋಜಕ ಸೂರ್ಯನಾರಾಯಣ ಸಹಿತ ಗಣ್ಯರು ಭಾಗವಹಿಸಲಿದ್ದಾರೆ.