Recent Posts

Monday, November 25, 2024
ಸುದ್ದಿ

ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಬಿರುಕು : ಅಧಿಕಾರಿಗಳಿಂದ ಪರಿಶೀಲನೆ -ಕಹಳೆ ನ್ಯೂಸ್

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯಭಾಗದಲ್ಲಿ ಸಣ್ಣದಾದ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಅಕ್ಕರಂಗಡಿ ಅಂದರೆ ಪಾಣೆಮಂಗಳೂರು ಕಡೆಯಿಂದ ಬರುವಾಗ ಸುಮಾರು ನಾಲ್ಕು ಪಿಲ್ಲರ್ ಗಳ ಪೈಕಿ ಬಿರುಕು ಕಾಣಿಸಿಕೊಂಡಿದೆ. ಸೇತುವೆ ಮೇಲ್ಬಾಗದಲ್ಲಿ ಡಾಮರು ಎದ್ದು ಹೋಗಿದ್ದು, ಸಣ್ಣ ಗುಂಡಿಯಾಗಿರುವುದು ಕಂಡು ಬಂದಿದೆ. ಈ ಬಗ್ಗೆ ಆದಿತ್ಯವಾರ ರಾತ್ರಿ ವೇಳೆ ಮಾಹಿತಿ ನೀಡಿದ್ದರು. ಇಂದು ಬೆಳಿಗ್ಗೆ ತಹಶಿಲ್ದಾರ್, ಪುರಸಭೆ ಅಧಿಕಾರಿಗಳು,ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಬಿರುಕು ಬಿಟ್ಟು ಅಪಾಯದಲ್ಲಿರುವ ಸ್ಥಳವನ್ನು ಪರಿಶೀಲನೆ ನಡೆಸಿದ್ದು, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಳೆಯ ಉಕ್ಕಿನ ಸೇತುವೆಯ ಆಯುಷ್ಯ ಮುಗಿದ ಹಿನ್ನೆಲೆಯಲ್ಲಿ ನೂತನ ಸೇತುವೆ ನಿರ್ಮಾಣ ಮಾಡಲಾಗಿದೆ. ಬಳಿಕ ಇಲಾಖೆ ಆಯುಷ್ಯ ಮುಗಿದ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂಬ ನಾಮಫಲಕವನ್ನು ಅಳವಡಿಸಿ ಎಚ್ಚರಿಕೆಯನ್ನು ನೀಡಿದ್ದು,ಅಪಾಯದ ಬಗ್ಗೆ ಮುನ್ಸೂಚನೆ ನೀಡಿತ್ತು. ಇವರ ಮಾತಿಗೆ ಬೆಲೆ ಕೊಡದೆ ಪಾಣೆಮಂಗಳೂರು ಪೇಟೆಯನ್ನು ಉಳಿಸಬೇಕು ಎಂಬ ಕೆಲವರ ಮೊಂಡು ವಾದ ಮತ್ತು ಬೇಡಿಕೆಯನ್ನು ಪೂರೈಸಲು ಬಸ್ ಸಹಿತ ಇತರ ವಾಹನಗಳು ಸಂಚಾರ ಆರಂಭಿಸಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಾಯವಿದೆ: ಕಂದಾಯ ಇಲಾಖೆ ಸೂಚನೆ

ರಾತ್ರಿ ವೇಳೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಸಂಬAಧಿಸಿದ ಇಲಾಖೆಗೆ ಮಾಹಿತಿ ನೀಡಿದ್ದರು.
ಇಂದು ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದರೆ ಈ ದಿನ ಯಾವುದೇ ಎಗ್ಗಿಲ್ಲದೆ ಘನ ವಾಹನಗಳು ಸಂಚಾರ ಮಾಡುತ್ತಿದ್ದವು. ಅಪಾಯಕಾರಿ ಸೇತುವೆಯ ಬಗ್ಗೆ ಇಲಾಖೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.