Recent Posts

Monday, January 27, 2025
ಸುದ್ದಿ

ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ಚಿತ್ರರಂಗಕ್ಕೆ ಎಂಟ್ರಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.


ನಟನೆಯೊಂದಿಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿರುವ ರಾಧಿಕಾ ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ಈಗಾಗಲೇ ಮೂರು ಚಿತ್ರಗಳನ್ನು ನಿರ್ಮಿಸಿದ್ದಾರೆ. ಈಗ ಅವರ ಸಹೋದರ ರವಿರಾಜ್ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಬರಲು ಸಿದ್ಧತೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಅವರು ಸಹ ನಿರ್ಮಾಪಕರಾಗಿ ಲಕ್ಕಿ, ಸ್ವೀಟಿ ನನ್ನ ಜೋಡಿ, ಭೈರಾದೇವಿ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಿನೆಮಾ ವಿತರಣೆ ವಿಭಾಗದಲ್ಲೂ ದುಡಿದಿರುವ ಅನುಭವ ಅವರಿಗೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ ಅವರು ಮಾತ್ರ ಸ್ವತಂತ್ರ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂಬ ಹೆಸರಿನ ನಿರ್ಮಾಣ ಸಂಸ್ಥೆಯನ್ನು ಕಟ್ಟಿದ್ದಾರೆ. ಇದರಲ್ಲಿ ಈಗಾಗಲೇ ಮೊದಲ ಸಿನೆಮಾದ ಚಿತ್ರೀಕರಣವನ್ನೂ ಮುಗಿಸಿದ್ದಾರೆ.

‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂಬುದು ಅವರ ತಂದೆಯ ಕನಸಿನ ಬ್ಯಾನರ್. ಅಪ್ಪನ ಕನಸನ್ನು ನನಸು ಮಾಡಲು ರವಿರಾಜ್ ಹೆಜ್ಜೆ ಇಟ್ಟಿದ್ದಾರೆ. ಈ ಬ್ಯಾನರ್ ನಡಿಯಲ್ಲಿ ಮೊದಲ ಹಾರರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
ಚಿತ್ರದಲ್ಲಿ ದೊಡ್ಡದೊಡ್ಡ ಸ್ಟಾರ್ ನಟರು ಕಾಣಿಸಿಕೊಂಡಿದ್ದು, ಸದ್ಯ ಎಲ್ಲವನ್ನೂ ಗೌಪ್ಯವಾಗಿ ಇಟ್ಟಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಇವರ ಈ ಚಿತ್ರ ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ. ಈ ಕುರಿತು ರವಿರಾಜ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದ್ದಾರೆ ಎನ್ನಲಾಗಿದೆ.