ಬೆಂಗಳೂರು : ಇಂದು ಅರಮನೆ ಮೈದಾನದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಕರೆ ಮುಹೂರ್ಥ, ಲಾಂಛನ ಬಿಡುಗಡೆ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಲಾಂಛನ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಇವರು ವಿವಿಡೆದೆ ನಡೆಯುವ 20ಕಂಬಳಕ್ಕೆ ತಲಾ 5ಲಕ್ಷ ನೀಡುವುದರ ಕುರಿತು ಬಜೆಟ್ ನಲ್ಲಿ ಈಗಾಗಲೇ ಚರ್ಚಿಸಲಾಗಿದ್ದು, ಬೆಂಗಳೂರು ಕಂಬಳಕ್ಕೆ ಸಂಪೂರ್ಣ ಸಹಕಾರ ನೀಡಲು ನಾನು ಬದ್ದ ಎಂದರು.
ನವೆಂಬರ್ 25ಮತ್ತು 26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ಮುಹೂರ್ಥ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದು ನಂತರ ಸಭಾ ಕಾರ್ಯಕ್ರಮ ನೆರವೇರಿತು.
ಈ ಸಂದರ್ಬದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಜನ ಎಲ್ಲಾ ಕ್ಷೇತ್ರದಲ್ಲೂ ಕಾರ್ಯನಿರ್ವಹಿಸುತ್ತಿದ್ದು ಈ ಕಂಬಳ ಇತಿಹಾಸದಲ್ಲಿ ದಾಖಲೆ ನಿರ್ಮಿಸಲಿದ್ದು, ಪುತ್ತೂರು ಶಾಸಕ ಅಶೋಕ್ ರೈ ಅವರು ಈ ಹಿಂದೆ ನನ್ನ ಶಿಷ್ಯನಾಗಿದ್ದು ಈಗ ಡಿ.ಕೆ.ಶಿ ಅವರ ಶಿಶ್ಯರಾಗಿದ್ದಾರೆ ಎಂದರು.
ಈ ಸಂದರ್ಭ ಅಶ್ವತ್ ನಾರಾಯಣ, ಬೆಂಗಳೂರುಕಂಬಳ ಸಮಿತಿ ಅಧ್ಯಕ್ಷರಾದ ಶಾಸಕ ಅಶೋಕ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ ,ಮುರಳೀಧರ್ ರೈ ಮಟಂತಬೆಟ್ಟು ಸಹಿತಿ ಸ್ಥಳೀಯ ಶಾಸಕ ಹ್ಯಾರಿಸ್, ಎಂ.ಎನ್.ರಾಜೇಂದ್ರ ಕುಮಾರ್, ಕಂಬಳ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.