Sunday, January 19, 2025
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು: ಕಾಲೇಜು ಕ್ಯಾಂಪಸ್ ಬಳಿ ಗಾಂಜಾ ಮಾರಟ ಮಾಡುತ್ತಿದ್ದ ಆರೋಪಿಗಳನ್ನು ಗಾಂಜಾ ಸಹಿತ ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ರಿಕ್ಷಾದಲ್ಲಿ ತಂದು ಉಪ್ಪಿನಂಗಡಿ ಕಾಲೇಜು ಸಮೀಪದ ವ್ಯಕ್ತಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಮಾರಟ ಮಾಡುತ್ತಿದ್ದ ವ್ಯಕ್ತಿಗಳು ಪರಾರಿಯಗಲು ವಿಫಲ ಯತ್ನ ನಡೆಸಿದ್ದಾರೆ. ಅಝೀದ್, ಮೊಹಮ್ಮದ್ ರಫೀಕ್, ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ ಎರಡು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿದ್ದ ಸುಮಾರು 4 ಕೆಜಿ ಗಾಂಜಾ, ಒಂದು ಬೈಕ್ ಹಾಗೂ ರಿಕ್ಷಾ ವಶಕ್ಕೆ ಪಡೆಯಲಾಗಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು