Sunday, November 24, 2024
ಸುದ್ದಿ

ಸುಳ್ಯದ ಯುವತಿಗೆ ಏರ್ ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವುದಾಗಿ ಸುಳ್ಳು ಭರವಸೆ : ಲಕ್ಷಾಂತರ ರೂ. ವಂಚನೆ – ಕಹಳೆ ನ್ಯೂಸ್

ಸುಳ್ಯ : ಯುವತಿಯೋರ್ವಳಿಗೆ ಏರ್ ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿಯಾಗಿರುವ ಯುವತಿ ವಂಚನೆಗೊಳಗಾದ ಬಗ್ಗೆ ದೂರು ನೀಡಿದ್ದಾರೆ
ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿAದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು, ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ದಾಖಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು