ಬಂಟ್ವಾಳ : ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ದಾಸಕೋಡಿ ಎಂಬಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ ಎಂಬವರು ನೀಡಿದ ದೂರಿನ ಅನ್ವಯ ಕಾರು ಚಾಲಕನ ವಿರುದ್ಧ ಬಂಟ್ವಾಳ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ (23) ಅ.12ರ ಸಂಜೆ ದಾಸಕೋಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ರಸ್ತೆಯ ಪಕ್ಕದಲ್ಲಿದ್ದ ಪಾವನಳಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯ ಬದಿಯಲ್ಲಿದ್ದ ಗುಂಡಿಯೊಂದಕ್ಕೆ ಬಿದ್ದು ತೀವ್ರ ಗಾಯಗೊಂಡ ಅವಳನ್ನು ಆಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೆÇಲೀಸ್ ಠಾಣೆಯಲ್ಲಿ ಅ.ಕ್ರ 141/2023 ಕಲಂ: 279, 304(ಎ) ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.