ಮಂಗಳೂರು : ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಂಜಾರು, ಪೋರ್ಕೊಡಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್ ಮತ್ತು ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್ ಎಂಬವರನ್ನು ವಶಕ್ಕೆ ಪಡೆದು ತಪಾಸಣೆಗೈದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಇವರ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕೊಳಂಬೆ ಗ್ರಾಮದ ಫನಾ ಕಾಲೇಜ್ ಬಳಿ ಹಾಗೂ ಕಂದಾವರ ಗ್ರಾಮದ ಅದ್ಯಪಾಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಯಿದ್ದೀನ್ ಶರೀಫ್, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್ ಅಮನ್ ಮತ್ತು ಕಂದಾವರ ಗ್ರಾಮದ ಅಮಾನುಲ್ಲಾ ಕಂಪೌoಡ್ ನಿವಾಸಿ ಮೊಹಮ್ಮದ್ ಶಾಹಿನ್ ಎಂಬವರನ್ನು ವಶಕ್ಕೆ ಪಡೆದು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಂಗಳೂರು ನಗರವನ್ನು ಮಾದಕವಸ್ತು ಮುಕ್ತ ನಗರವನ್ನಾಗಿ ಮಾಡಲು ದೃಢನಿರ್ಧಾರವನ್ನು ಕೈಗೊಂಡಿರುವ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಬಜಪೆ ಪೊಲೀಸ್ ಠಾಣೆಯ ಪೊಲೀಸರ ತಂಡ ಈ ಕಾರ್ಯಾಚರಣೆಯನ್ನು ಮಾಡಿದೆ.