Recent Posts

Tuesday, November 26, 2024
ಸುದ್ದಿ

ಉಡುಪಿ ಜಿಲ್ಲೆಯಾದ್ಯಂತ ಅ.14 ಮತ್ತು 15 ರಂದು ನಿಷೇದಾಜ್ಞೆ ಜಾರಿ : ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಉಡುಪಿ : ನವರಾತ್ರಿಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಅ. 14,15 ರಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮಹಿಷ ದಸರ ಆಚರಣೆ ಪರ/ವಿರೋಧ ಬಗ್ಗೆ, ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸಲು ಮತ್ತು ಪ್ರತಿಭಟನೆ, ಮೆರವಣಿಗೆಗಳನ್ನು ನಿಷೇಧಿಸಿ ಕೆ.ಪಿ. ಆಕ್ಟ್ ಕಲಂ 35ರಡಿಯಲ್ಲಿ ನಿಷೇದಾಜ್ಞೆಯನ್ನು‌ ಜಾರಿಗೊಳಿಸುವ ಕುರಿತು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಜಿಲ್ಲೆಯಲ್ಲಿ ನವರಾತ್ರಿ ಉತ್ಸವ ಪ್ರಾರಂಭಗೊಳ್ಳಲಿದ್ದು, ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳನ್ನು ಅವಲೋಕಿಸಿ, ದಿನಾಂಕ 14.10.2023 ಮತ್ತು 15.10.2023 ರಂದು ಉಡುಪಿ, ಮಣಿಪಾಲ,ಮಲ್ಪೆ ಮತ್ತು ಹೆಚ್ಚಿನ ಕಡೆಗಳಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯ ಜನದಟ್ಟಣೆ/ಸಂಚಾರ/ಅಂಗಡಿ ಮುಂಗಟ್ಟುಗಳ ಚಟುವಟಿಕೆಗಳು ಹೆಚ್ಚಾಗಿ ಜರಗುವುದರಿಂದ ದಿನಾಂಕ:14.10.2023 ಮತ್ತು15.10.2023 ರಂದು ಉಡುಪಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಗುವುದರಿಂದ ಮಹಿಷ ದಸರ ಪರ /ವಿರೋಧ ಯಾವುದೇ ರೀತಿಯ ಪ್ರತಿಭಟನ ಮೆರವಣಿಗೆ, ಮತ್ತು ಬ್ಯಾನರ್‌, ಬಂಟಿಂಗ್, ಪೋಸ್ಟರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಿ ಕೆ.ಪಿ. ಆಕ್ಟ್ 1963ರ ಕಲಂ 35ರಡಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ದಿನಾಂಕ:14.10.2023 ಮತ್ತು 15.10.2023 ರಂದು ನಿಷೇಧಾಜ್ಞೆಯನ್ನು ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರು ಕೋರಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ದರಿಂದ ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವನ್ನು ವಹಿಸುವುದು ಅತ್ಯಗತ್ಯವಾಗಿರುವುದರಿಂದ ಸಾರ್ವಜನಿಕರು ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಡಾ. ಕೆ ವಿದ್ಯಾಕುಮಾರಿ ,ಭಾ.ಆ.ಸೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಆದ ನಾನು ಕೆ.ಪಿ. ಆಕ್ಟ್ 1963ರ ಕಲಂ 35 ರಡಿಯಲ್ಲಿ ಪುದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ದಿನಾಂಕ:14.10.2023 ರಿಂದ 15.10.2023 ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಈ ಕೆಳಕಂಡ ಆದೇಶ ಹೊರಡಿಸಿರುತ್ತೇನೆ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

ಆದೇಶ ಕಾಪಾಡುವ ಮೇಲಿನ ಸಕಾರಣಗಳೊಂದಿಗೆ ವಿವರಿಸಿದ ಅಂಶಗಳನ್ನು ಆಧರಿಸಿ, ಕಾನೂನು ಸುವ್ಯವಸ್ಥೆಯನ್ನು ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕೆ.ಪಿ. ಆಕ್ಟ್ 1963ರ ಕಲಂ 35 ರಡಿಯಲ್ಲಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಉಡುಪಿ ಜಿಲ್ಲೆಯಾದ್ಯಂತ ದಿನಾಂಕ: 14.10.2023 ಬೆಳಿಗ್ಗೆ 6.00 ರಿಂದ ಜಾರಿಗೆ ಬರುವಂತೆ ಹಾಗೂ ದಿನಾಂಕ: 15.10.2023 ರ ಸಂಜೆ 06.00 ಗಂಟೆಯವರೆಗೆ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ನಿಬಂಧನೆಗಳು :

ಮಹಿಷ ದಸರ ಆಚರಣೆ ಪರ/ವಿರೋಧದದ ಬಗೆ, ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ ಅಳವಡಿಸುವುದು ಪ್ರತಿಭಟನೆ / ಮೆರವಣಿಗೆಗಳನ್ನು /ಅವಹೇಳನಕಾರಿಯಂತಹ ಯಾವುದೇ ಘೋಷಣೆಗಳು/ಭಾಷಣಗಳು ಪುಕಟಣೆಗಳು/ ಅವಾಚ್ಯ ಶಬ್ದಗಳ ಬಳಕೆ/ಪುಚೋದನಾಕಾರಿ ಭಾಷಣ/ ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದಗಳು, ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

• ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

• ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದು ನಿಷೇಧಿಸಿದ.

• ಪುಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಮಾಡುವುದು ಹಾಡುಗಳನ್ನು ಹಾಡುವುದು,ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪುಯೋಗ ಮಾಡುವುದು, ಮತ್ತು ಚಿತ್ರಗಳನ್ನು ಸಂಕೇತಗಳನ್ನು ಭಿತ್ತಿಪತ್ರಗಳನ್ನು ಆಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪಸಾರ ಮಾಡುವುದನ್ನು ನಿಷೇಧಿಸಿದೆ .

ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ.