ಮಂಗಳೂರಿನಲ್ಲಿ ಆಸ್ತಿ ಮಾರಾಟ ಹಾಗೂ ಖರೀದಿಸುವ ಸಂದರ್ಭದಲ್ಲಿ ಮಿನಿ ವಿಧಾನಸೌಧದ
ಉಪನೋಂದಣಿ ಕಛೇರಿಯಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸಿ ಬಯೋಮೆಟ್ರಿಕ್ ನೀಡಿದ ನಂತರ ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರುಗಳ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಡ್ರಾ ಆಗಿ ವಂಚನೆಯಾಗಿದ್ದು ಈ ಬಗ್ಗೆ ಸಾರ್ವಜನಿಕರು ಸೈಬರ್ ಕ್ರೈಂ ಠಾಣೆಗಳಲ್ಲಿ ದೂರುಗಳನ್ನು ಸಲ್ಲಿಸಿ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.
ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರಾದ ಕೃಷ್ಣಬೈರೇಗೌಡರನ್ನು ಭೇಟಿ ಮಾಡಿದ ಅವರು, ಕಷ್ಟಪಟ್ಟು ದುಡಿದ ಹಣವನ್ನು ಸರ್ಕಾರದ ವ್ಯವಸ್ಥೆಯ ನ್ಯೂನ್ಯತೆಯಿಂದಾಗಿಯೇ ಕಳೆದುಕೊಂಡ ಸಾರ್ವಜನಿಕರಿಗೆ ಸರ್ಕಾರವೇ ಪರಿಹಾರ ಒದಗಿಸಬೇಕು ಮತ್ತು ಸಾರ್ವಜನಿಕರ ಬಯೋಮೆಟ್ರಿಕ್ ನಂತಹ ಖಾಸಗಿ ಮಾಹಿತಿಗಳು ಸೈಬರ್ ವಂಚಕರಿಗೆ ಹೇಗೆ ತಲುಪುತ್ತಿದೆ ಎಂಬುದರ ಬಗ್ಗೆ ಸೂಕ್ತ ತನಿಖೆಯನ್ನು ಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರವನ್ನು ಆಗ್ರಹಿಸಿದರು.