Friday, November 29, 2024
ಸುದ್ದಿ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ನಡೆಯಿತು.

ಸಬ್‌  ಇನ್ಸ್ಪೆಕ್ಟರ್ ಹರೀಶ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸೈಬರ್ ಕ್ರೈಮ್ ಹೆಚ್ಚುತ್ತಿದ್ದು, ಇದರ ಕುರಿತು ಎಚ್ಚರಿಕೆ ಅತಿ ಅಗತ್ಯವಾಗಿದೆ. ವಿಶೇಷವಾಗಿ ಅಮಾಯಕರನ್ನು ಇಂತಹ ಕ್ರೈಮ್ ಬಲೆಗೆ ಬೀಳಿಸಿ ಅವರಿಂದ ಹಣ ಪೀಕಿಸುವ ಜತೆಗೆ ಬೇರೆ ಬೇರೆ ರೀತಿಯಲ್ಲಿ ಅವರನ್ನು ಸಂಕಷ್ಟಕ್ಕೆ ಬೀಳಿಸುವ ಪ್ರಯತ್ನಗಳು ನಡೆಯುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಡಗಬೆಳ್ಳೂರು ಗ್ರಾಮದಲ್ಲಿ ಪರಿಶಿಷ್ಟರ ಕುಟುಂಬವೊಂದು ತೀರಾ ಸಂಕಷ್ಟದಲ್ಲಿದ್ದು, ಸಮರ್ಪಕವಾದ ವಸತಿ ವ್ಯವಸ್ಥೆಯೂ ಇಲ್ಲವಾಗಿದೆ. ಜತೆಗೆ ಬಹಳ ಮುಖ್ಯವಾಗಿ ಅವರ ಮಕ್ಕಳು ಶಿಕ್ಷಣದಿಂದ ವಂಚಿತವಾಗಿದ್ದು, ಅದರ ಕುರಿತು ಗಮನಹರಿಸುವಂತೆ ದಲಿತ ಮುಖಂಡರು ಸಭೆಯಲ್ಲಿ ಆಗ್ರಹಿಸಿದರು. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಪೊಲೀಸರು ಭರವಸೆ ನೀಡಿದರು.
ಸರಪಾಡಿ ಗ್ರಾಮದ ಮಠದಬೆಟ್ಟುನಲ್ಲಿ ಹಿಂದೂ ರುದ್ರಭೂಮಿಯ ಅಭಿವೃದ್ಧಿಗೆ ಅನುದಾನ ಇಡಲಾಗಿದ್ದು, ಅಭಿವೃದ್ಧಿಯ ವಿಚಾರ ಏನಾಯಿತು ಎಂದು ಸಭೆಯಲ್ಲಿ ಪ್ರಶ್ನಿಸಲಾಯಿತು. ಈ ಕುರಿತು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳ ಬಳಿ ಮಾಹಿತಿ ಕೇಳಲಾಗುವುದು ಎಂದು ಪೊಲೀಸರು ತಿಳಿಸಿದರು. ಠಾಣಾ ವ್ಯಾಪ್ತಿಯ ಪ್ರತಿ ಗ್ರಾಮ ವ್ಯಾಪ್ತಿಯಲ್ಲಿ ಸಭೆ ಕರೆಯುವಂತೆ ಮುಖಂಡರು ಒತ್ತಾಯಿಸಿದರು. ಕೆಂಪುಗುಡ್ಡೆ ಕ್ರಾಸ್ ಬಳಿ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಅದರ ಕುರಿತು ಪೊಲೀಸರು ಗಮನಹರಿಸಿ ಕಳ್ಳರನ್ನು ಮಟ್ಟ ಹಾಕುವ ಕಾರ್ಯವನ್ನು ಪೊಲೀಸರು ಮಾಡಬೇಕು ಎಂದು ಆಗ್ರಹಿಸಿದರು. ಸಬ್‌ಇನ್ಸ್ಪೆಕ್ಟರ್‌ಗಳಾದ ಮೂರ್ತಿ, ಭಾರತಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು