Recent Posts

Monday, January 27, 2025
ಸುದ್ದಿ

ಪತ್ನಿಯನ್ನೇ ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಪತಿ ; ಎರಡು ಮಕ್ಕಳು ಅನಾಥ – ಕಹಳೆ ನ್ಯೂಸ್

ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಹೆಂಡತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.


ನಂದಿನಿ(30) ಕೊಲೆಯಾದ ಮಹಿಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ಓರ್ವ ಪುತ್ರ ಹಾಗೂ ಮಗಳೊಂದಿಗೆ ಕಳೆದ 3 ದಿನಗಳಿಂದ ಸಬ್ಬತ್ತಿ ಕ್ರಾಸ್‌ನಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು.ಇಬ್ಬರ ನಡುವೆ ಗಲಾಟೆ ನಡೆದಿದ್ದು, ಜಗಳದಲ್ಲಿ ಲೋಕೇಶ ನಾಯ್ಕ ಮಾರಕಾಸ್ತ್ರದಿಂದ ಪತ್ನಿಯ ಕುತ್ತಿಗೆ ಹೊಡೆದಿದ್ದಾನೆ. ಪರಿಣಾಮ ನಂದಿನಿ ರಕ್ತದ ಮಡುವಿನಲ್ಲೇ ಮನೆಯಿಂದ ಹೊರಗೆ ಓಡಿಬಂದು ನೆಲಕ್ಕೆ ಬಿದ್ದು ಪ್ರಾಣಬಿಟ್ಟಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಕ್ತದ ಮಡುವಿನಲ್ಲಿ ಬಿದ್ದ ಮಹಿಳೆಯನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಸಿಪಿಐ ಸಂತೋಷ ಕಾಯ್ಕಿಣಿ ಮತ್ತು ದೌಡಾಯಿಸಿ ಪರಿಶೀಲನೆ ನಡೆಸಿ. ಬಳಿಕ ಆರೋಪಿ ಪತಿ ಲೋಕೇಶ ನಾಯ್ಕನನ್ನು ಖಾಸಗಿ ಹೋಟೆಲೊಂದರಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.