Thursday, January 23, 2025
ಸುದ್ದಿ

ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಸಭೆ – ಕಹಳೆ ನ್ಯೂಸ್

ಮಂಗಳೂರು : ತಾಲೂಕು ಪಂಚಾಯತ್ ವ್ಯಾಪ್ತಿಯ ತ್ರೈಮಾಸಿಕ ಕೆ.ಡಿ.ಪಿ. ಸಭೆ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ವೈ ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ಶ್ರೀ ರವಿ ಕುಮಾರ್ ಎಂ., ತಾಲೂಕು ಪಂಚಾಯತ್ನ ಕಾರ್ಯ ನಿರ್ವಹಣಾಧಿಕಾರಿಗಳಾದ ಮಹೇಶ್ ಕುಮಾರ್ ಹೊಳ್ಳ, ತಹಶೀಲ್ದಾರರು ಪ್ರಶಾಂತ್ ಪಾಟೀಲ್ ಹಾಗೂ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು. ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಾಧಿಸಿದ ಪ್ರಗತಿಗಳ ಸಭೆಯಲ್ಲಿ ಚರ್ಚಿಸಲಾಯಿತು. ಮಾತ್ರವಲ್ಲದೆ ಚಾಲ್ತಿಯಲ್ಲಿರುವ ಯೋಜನೆಗಳ ಮಾಹಿತಿ, ಹೊಸ ಯೋಜನೆಗಳ ಮಾಹಿತಿಯನ್ನು ಆಯಾ ಇಲಾಖಾ ಅಧಿಕಾರಿಗಳು ನೀಡಿದರು. ಸಾರ್ವಜನಿಕ ವಲಯಗಳಲ್ಲಿ ಬಹುವಾಗಿ ಚರ್ಚಿತ ಇಲಾಖಾ ಸಾಮಾನ್ಯ ಸಮಸ್ಯೆಗಳು ಮತ್ತು ಈ ಬಗ್ಗೆ ಪೂರಕವಾಗಿ ಇಲಾಖಾ ಮಟ್ಟದಲ್ಲಿ ಕೈಗೊಳ್ಳಬಹುದಾದ ಪರಿಹಾರ ಮಾರ್ಗೋಪಾಯಗಳ ಬಗ್ಗೆಯೂ ಚರ್ಚಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು