Wednesday, January 22, 2025
ಸುದ್ದಿ

8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ – 80 ಬಡಗಬೆಟ್ಟು – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ – ಕಹಳೆ ನ್ಯೂಸ್

8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ – 80 ಬಡಗಬೆಟ್ಟು – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿಗೊಳ್ಳುತ್ತಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರರಾದ ಗಿರೀಶ್ ಮತ್ತು ಅಲೆವೂರು ಗ್ರಾಮ ಪಂಚಾಯತ್ ಸದಸ್ಯರು, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು