Thursday, January 23, 2025
ಸುದ್ದಿ

ದೀಪಾವಳಿ ಸೀರೆ ವಿತರಣಾ ಕಾರ್ಯಕ್ರಮ : ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು – ಕಹಳೆ ನ್ಯೂಸ್

ಪುತ್ತೂರು: ದೀಪಾವಳಿ ಪ್ರಯುಕ್ತ ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು , ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಇದ್ದು ಕೈಗೊಂಡಿರುವ ಸಿದ್ದತೆಗಳನ್ನು ಶಾಸಕರು ಪರಿಶೀಲನೆ ಮಾಡಿದರು.

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್,ರೈ ಟ್ರಸ್ಟ್ ನ ಮುಖ್ಯಸ್ಥರಾದ ನಿಹಾಲ್ ಶೆಟ್ಟಿ, ನಿವೃತ್ತ ಶಿಕ್ಷಕ ದಯಾನಂದ ರೈ ಕೊಮರ್ಂಡ,ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಯುವ ಕಾಂಗ್ರೆಸ್ ನ ಹನೀಫ್ ಪುಂಚತ್ತಾರ್, ಇಂಜಿನಿಯರ್ ಸಂತೋμï ಶೆಟ್ಡಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಯೋಗೀಶ್ ಸಾಮಾನಿ, ಟ್ರಸ್ಟ್ ನ ಪ್ರಮುಖರಾದ ಕೃಷ್ಣಪ್ರಸಾದ್ ಭಟ್ ಬೊಳ್ಳಮೆ ,ದಾಮೋದರ್ ಕೋಡಿಂಬಾಡಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು