Thursday, January 23, 2025
ಸುದ್ದಿ

ಪುಣಚ : ನೇಣುಬಿಗಿದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ವಿಟ್ಲ : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚ ಚೆಕ್ಕುತ್ತಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26 ವ.) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣರವರು ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು