Friday, January 24, 2025
ಸುದ್ದಿ

ಬಂಟ್ವಾಳ ಕಡೇಶಿವಾಲಯ ; ನೇಣುಬಿಗಿದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ವಿಟ್ಲ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.


ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ದಿ.ಸುಂದರ ರವರ ಪುತ್ರ ಸಚಿನ್ (24 ವ.)ರವರು ಆತ್ಮಹತ್ಯೆ ಮಾಡಿಕೊಂಡ ಯುವಕ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಚಿನ್ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.ಮೊಬೈಲ್ ಗೆ ಕರೆ ಮಾಡಿದಾಗ ಅದು ರಿಂಗ್ ಆಗುತ್ತಿತ್ತು ವಿನಹ ರಿಸೀವ್ ಮಾಡದೆ ಇರುವಾಗ ಬಂಟ್ವಾಳದ ಕಾಮಾಜೆ ಮಾವನ ಮನೆಯವರಿಗೆ ವಿಚಾರ ತಿಳಿಸಿದ್ದಾರೆ. ಬಳಿಕ ಅವರು ಹುಡುಕಾಟ ನಡೆಸಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಪೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಪೋನ್ ರಿಂಗ್ ಆಗುತ್ತಿರುವುದು ಕೇಳುತ್ತಿತ್ತು. ಬಳಿಕ ಅಲ್ಲಿಗೆ ಹೋಗಿ ನೋಡಿದಾಗ ಸಚಿನ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗ ಚೀಟಿ ಪೋಲೀಸರ ಕೈ ಸೇರಿದೆ. ನಗರ ಠಾಣಾ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.