ಕಾಪು: ನನ್ನ ಮಣ್ಣು ನನ್ನ ದೇಶ ಅಭಿಯಾನ ತಾಲೂಕು ಮಟ್ಟದ ಕಲಶ ಯಾತ್ರೆ ಕಾಪುವಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ನೆಹರು ಯುವ ಕೇಂದ್ರ ಉಡುಪಿ, ಕಾಪು ತಾಲೂಕು ಪಂಚಾಯತ್, ತಾಲೂಕು ಆಡಳಿತ ಕಾಪು, ಕಾಪು ಪುರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ “ನನ್ನ ಮಣ್ಣು ನನ್ನ ದೇಶ ಅಭಿಯಾನ ಕಲಶ ಯಾತ್ರೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.
ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ “ಅಮೃತ ವಾಟಿಕ’ ಹುತಾತ್ಮ ಯೋಧರ ಉದ್ಯಾನವನ ನಿರ್ಮಾಣವಾಗಲಿದ್ದು ಆ ಪ್ರಯುಕ್ತ ದೇಶದ ವಿವಿಧ ಭಾಗಗಳಿಂದ ಮಣ್ಣನ್ನು ಹಾಗೂ ಸಸಿಗಳನ್ನು ಸಂಗ್ರಹಿಸಿ ಬೆಳೆಸುವ ನಿಟ್ಟಿನಲ್ಲಿ ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವದ ಕಾರ್ಯಕ್ರಮ ಕೊನೆಯ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋμï, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ
ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಗಾವಂಸ್ಕರ್, ನೆಹರು ಯುವ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದರು.