Wednesday, January 22, 2025
ಸುದ್ದಿ

ಮಂಗಳೂರು : ನವರಾತ್ರಿ ಮೆರವಣಿಗೆ ಹಿನ್ನಲೆ ಮದ್ಯದ ಅಂಗಡಿ ಬಂದ್ ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಖಡಕ್ ಸೂಚನೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ದಸರಾ ಉತ್ಸವ ಆಚರಣೆ ಸಂದರ್ಭ ಮೆರವಣಿಗೆ ನಡೆಯಲಿದ್ದು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆ ನಡೆಯದಂತೆ ಕಾನೂನು ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಡೆ ದಸರಾ ಮೆರವಣಿಗೆ ನಡೆಯುವ ದಿನದಂದು ಬಾರ್, ವೈನ್ ಶಾಪ್ ಮತ್ತು ಮಧ್ಯದ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೆರವಣಿಗೆ ಸಾಗುವ ಮಾರ್ಗದಲ್ಲಿ ಮತ್ತು ಆಸುಪಾಸಿನ ಸ್ಥಳಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿ, ಬಾರ್, ವೈನ್ ಶಾಪ್ಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ. ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ.