Thursday, January 23, 2025
ಸುದ್ದಿ

ಕಾಪು ದೇವಾಡಿಗರ ಸೇವಾ ಸಂಘದ ನೂತನ ಕಟ್ಟಡ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ – ಕಹಳೆ ನ್ಯೂಸ್

ದೇವಾಡಿಗರ ಸೇವಾ ಸಂಘ (ರಿ.) ಕಾಪು ಇದರ ನೂತನ ಕಟ್ಟಡದ ಗುದ್ದಲಿ ಪೂಜೆಯನ್ನು ಇಂದು  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಪು ದೇವಾಡಿಗರ ಸೇವಾ ಸಂಘದ ಅಧ್ಯಕ್ಷರಾದ ಗೋವರ್ಧನ್ ಸೇರಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ದೇವಾಡಿಗರ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಸಾವಿತ್ರಿ ಸುಧಾಕರ, ಪುರಸಭಾ ಸದಸ್ಯರಾದ ಹರಿಣಾಕ್ಷಿ, ಅರುಣ್ ಶೆಟ್ಟಿ, ವಿದ್ಯಾಲತಾ, ಲಕ್ಷ್ಮಿ ಜನಾರ್ದನ ದೇವಸ್ಥಾನ ಆಡಳಿತಾಧಿಕಾರಿಗಳಾದ ಅರುಣ್, ಕಾಪು ದೇವಾಡಿಗರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.