Friday, January 24, 2025
ಸುದ್ದಿ

ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್

ಕೊಕ್ಕಡ: ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿ ವ್ಯವಹರಿಸಿ ಒಟಿಪಿ ಪಡೆದುಕೊಂಡು ಖಾತೆಯಿಂದ ರೂ.1,46,900 ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ನಿವಾಸಿ ಹರಿಣಿ (40ವ.) ಮೋಸ ಹೋದ ಮಹಿಳೆ. ಹರಿಣಿ ಅವರು 1 ವಾರದ ಹಿಂದೆ ಜಮೀನು ಮಾರಾಟದ ಹಣವನ್ನು ಬ್ಯಾಂಕಿನಲ್ಲಿ ಜಮೆ ಮಾಡಿದ್ದರು. ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿಯೇ ಹರಿಣಿಯವರ ಜೊತೆಗೆ ಯಾರೋ ಅಪರಿಚಿತರು ವ್ಯವಹರಿಸಿ ಅ.21ರಂದು ಒಟಿಪಿ ಕೇಳಿ ಪಡೆದುಕೊಂಡು ಹರಿಣಿಯವರ ಖಾತೆಯಿಂದ ರೂ.1,46,900 ವರ್ಗಾಯಿಸಿ ಮೋಸ ಮಾಡಿದ್ದಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಹರಿಣಿಯವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2023, ಕಲಂ:419, 420 ಐಪಿಸಿ ಮತ್ತು ಕಲಂ 66(ಸಿ) 66(ಡಿ) ಐಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು