ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ವತಿಯಿಂದ ಮಾದಕದ್ರವ್ಯ ವ್ಯಸನ ತಡೆಗಟ್ಟುವ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಮತ್ತು ರೆಡ್ ಕ್ರಾಸ್ ಘಟಕಗಳ ವತಿಯಿಂದ ಮಾದಕದ್ರವ್ಯ ವ್ಯಸನ ತಡೆಗಟ್ಟುವ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ಭಾಗವಹಿಸಿದ ಡಾ. ವೀಣಾ ಅಧ್ಯಕ್ಷರು ಭಾರತೀಯ ವೈದ್ಯ ಕೀಯ ಸಂಘ ಸುಳ್ಯ ಶಾಖೆ ಇವರು ಮಾದಕ ದ್ರವ್ಯ ವಸ್ತುಗಳು ಮತ್ತು ಇದನ್ನು ತಡೆಗಟ್ಟುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ ರುದ್ರಕುಮಾರ್ ಎಮ್ ಎಮ್ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು. ಘಟಕಾಧಿಕಾರಿ ಸಂಜೀವ ಕೆ. ಪ್ರಾಸ್ತಾವಿಕ ಮಾತನಾಡಿ, ವಿಜ್ಞಾನ ವಿಭಾಗದ ಸೌಮ್ಯ ಸ್ವಾಗತಿಸಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದೀಪ್ತಿ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಎನ್ ಎಸ್ ಎಸ್ ಘಟಕಾಧಿಕಾರಿ ಚಿತ್ರಲೇಖ ಕೆ ಎಸ್ ಮತ್ತು ಎಲ್ಲಾ ಸ್ವಯಂಸೇವಕರು ಸಹಕರಿಸಿದರು.