Recent Posts

Sunday, January 19, 2025
ಸುದ್ದಿ

ತಿತ್ಲಿ ಚಂಡಮಾರುತಕ್ಕೆ ಜನಜೀವನ ಅಸ್ತವ್ಯಸ್ಥ: ಹವಾಮಾನ ಇಲಾಖೆ ಎಚ್ಚರಿಕೆ ಸೂಚನೆ – ಕಹಳೆ ನ್ಯೂಸ್

ಆಂಧ್ರಪ್ರದೇಶ ಮತ್ತು ಒಡಿಶಾಕ್ಕೆ ಅಪ್ಪಳಿಸಿರುವ ತಿತ್ಲಿ ಚಂಡಮಾರುತಕ್ಕೆ ಜನಜೀವನ ಅಸ್ತವ್ಯಸ್ಥವಾಗಿದೆ. ಹಾಗೇ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ತಿತ್ಲಿ ಚಂಡಮಾರುತದಿಂದ ಮುನ್ನೆಚ್ಚರಿಕೆ ವಹಿಸುವಂತೆ ಇದುವರೆಗೂ 3 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗಂಟೆಗೆ 120 ರಿಂದ 140 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅದರೊಟ್ಟಿಗೆ ಮಳೆಯೂ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ. ಇನ್ನು ಈ ತಿತ್ಲಿ ಚಂಡಮಾರುತಕ್ಕೆ ಆಂಧ್ರದಲ್ಲಿ 8 ಮಂದಿ ಮೃತರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.