Tuesday, November 26, 2024
ಸುದ್ದಿ

ಬಂಟ್ವಾಳ : ಸಾಲ ಬಾಧೆಯಿಂದ ಯುವಕ ನೇಣಿಗೆ ಶರಣು – ಕಹಳೆ ನ್ಯೂಸ್

ಬಂಟ್ವಾಳ : ಸಾಲದ ಬಾಧೆಯಿಂದ ಕಂಗೆಟ್ಟ ಯುವಕ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪದಲ್ಲಿ ನಡೆದಿದೆ.

ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆ ಮಂದಿ ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಮನೆಯವರು ಪೂಜೆ ಮುಗಿಸಿಕೊಂಡು ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಸಿ ಮೀನು ವ್ಯಾಪಾರ ಮಾಡುತ್ತಿದ್ದ ಸನತ್ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೇ ಮೀನು ವ್ಯಾಪಾರ ಕೈ ಹಿಡಿಯದೆ ನಷ್ಟಕ್ಕೆ ತುತ್ತಾಗಿದ್ದ. ಹೀಗಾಗಿ ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಲಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಖರೀದಿಸಿದ್ದ ಟೆಂಪೋವನ್ನು ಕೂಡ ಮಾರಾಟ ಮಾಡಿದ್ದ. ಇತ್ತೀಚಿನ ದಿನಗಳಲ್ಲಿ ಅರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದ ಈತ ಮಾನಸಿಕವಾಗಿ ನೊಂದುಕೊಂಡಿದ್ದು, ಹೀಗಾಗಿಯೇ ದುಡುಕಿನ ನಿರ್ಧಾರಕ್ಕೆ ಮುಂದಾಗಿದ್ದ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.