Friday, November 29, 2024
ಸುದ್ದಿ

ಪುತ್ತೂರು : ವಿವಿಧ ಗ್ರಾಮೀಣ ರಸ್ತೆಗಳಿಗೆ ಒಟ್ಟು 1.70 ಕೋಟಿ ಬಿಡುಗಡೆ : ಹುಟ್ಟೂರು ಕೋಡಿಂಬಾಡಿಗೆ ಶಾಸಕರಿಂದ ಭರ್ಜರಿ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವುದರಿಂದ ಯಾವುದೇ ಮೂಲಭೂತ ಸೌಕರ್ಯಗಳಿಗೆ ಅನುದಾನ ಇರುವುದಿಲ್ಲ. ಬೇರೆ ಯಾವುದೇ ಅಭಿವೃದ್ದಿಯಾಗುವುದಿಲ್ಲ, ಪುತ್ತೂರಿನ ಅಭಿವೃದ್ದಿಗೆ ಇದುವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಎಂದು ವಿರೋಧ ಪಕ್ಷದವರು ಆರೋಪ ಮಾಡಿದ್ದರು. ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡುವ ಮೂಲಕ ವಿರೋಧ ಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಸಾಬೀತಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.

ರಾಜ್ಯ ಸರಕಾರದಿಂದ ವಿವಿಧ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಒಟ್ಟು 1.70 ಕೋಟಿ ಬಿಡುಗಡೆಯಾಗಿರುವ ಮಾಹಿತಿಯನ್ನು ಹಂಚಿಕೊಂಡ ಅವರು ಸಂಬಂಧಿಸಿದ ಪಟ್ಟಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸರಕಾರ ಗ್ಯಾರಂಟಿ ಯೋಜನೆಯನ್ನು ಕೊಟ್ಟಿದ್ದರೂ ಕ್ಷೇತ್ರಗಳ ಅನುದಾನದಲ್ಲಿ ಯಾವುದೇ ಕೊರತೆನ್ನು ಮಾಡಿಲ್ಲ. ಮುಂದಿನ ದಿನಗಳಲ್ಲಿ ಮಾಡುವುದೂ ಇಲ್ಲ. ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ಕ್ಷೇತ್ರಕ್ಕೆ ತರಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು