ಚಿಕ್ಕಬಳ್ಳಾಪುರ : ಸಿಮೆಂಟ್ ಬಲ್ಕರ್ಗೆ ಟಾಟಾ ಸುಮೋ ಢಿಕ್ಕಿ ಹೊಡೆದು 13 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ಚಿತ್ರಾವತಿ ಬಳಿ ಗುರುವಾರ ನಡೆದಿದೆ.
ಟಾಟಾ ಸುಮೋ ಆಂಧ್ರಪ್ರದೇಶದಿoದ ಬೆಂಗಳೂರಿನತ್ತ ತೆರಳುವ ವೇಳೆ ಘಟನೆ ನಡೆದಿದ್ದು. ಟಾಟಾ ಸುಮೋದಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರದ ತಾಯಿ ಅರುಣಾ, ಮಗ ಋತ್ವಿಕ್, ಆಂಧ್ರಪ್ರದೇಶದ ಕೊತ್ತಚೆರುವಿನ ಪೆರುಮಾಳ್ ಪವನ್ ಕುಮಾರ್, ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಬ್ಬಮ್ಮ, ಬಾಗೇಪಲ್ಲಿ ತಾಲ್ಲೂಕಿನ ಮಾರ್ಗಾನುಕುಂಟೆಯ ನರಸಿಂಹಮೂರ್ತಿ, ಟಾಟಾ ಸುಮೊ ಚಾಲಕ ಆಂಧ್ರಪ್ರದೇಶದ ಕಲಿಗೆರೆಯ ನರಸಿಂಹಪ್ಪ ಮೃತರು.
ಇನ್ನು 7 ಮಂದಿಯ ಗುರುತು ಪತ್ತೆಯಾಗಬೇಕಿದೆ. ಘಟನೆಯಲ್ಲಿ 3 ಜನರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.