Thursday, November 28, 2024
ಸುದ್ದಿ

ಮಂಗಳೂರು ; ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ಶಾರದಾ ಮಹೋತ್ಸವ ಸಂಪನ್ನ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠದ ವತಿಯಿಂದ ನಡೆದ 101 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ನಿನ್ನೆ ರಾತ್ರಿ ವೈಭವದ ಶೋಭಾ ಯಾತ್ರೆಯೊಂದಿಗೆ ಸಂಪನ್ನಗೊoಡಿದೆ.


ಅ.19 ರಿoದ ಆಚಾರ್ಯಮಠ ವಠಾರದಲ್ಲಿ ಪೂಜಿಸಲ್ಪಟ್ಟ ಶಾರದಾ ಮಾತೆಯನ್ನು ಬುಧವಾರ ಸಂಜೆ ದರ್ಶನಕ್ಕೆ ಅನುವು ಮಾಡಿಕೊಡಲಾಗಿದ್ದು ಸಹಸ್ರಾರು ಮಂದಿ ಭಕ್ತರು ಶಾರದಾ ಮಾತೆಯನ್ನು ವೀಕ್ಷಿಸಿ ಕಣ್ತುಂಬಿಕೊAಡು ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ ಭಕ್ತರಿಂದ ದುರ್ಗಾ ಶ್ಲೋಕದ ಸಾಮೂಹಿಕ ಪಠಣದ ನಡುವೆ ಗೋವಿಂದಾ ಅನ್ನಿ ಗೋವಿಂದಾ ಎನ್ನುವ ಘೋಷಗಳೊಂದಿಗೆ ಮಹಾ ಮಂಗಳಾರತಿ ನೆರವೇರಿತು. ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆಯು ಉತ್ಸವ ಸ್ಥಾನದಿಂದ ಹೊರಟಿತು. ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ, ರಥಬೀದಿಯಾಗಿ ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜನೆ ನಡೆಯಿತು.
ಸ್ವಯಂಸೇವಕರು ಭುಜ ಸೇವೆಯ ಮೂಲಕ ಶ್ರೀ ಮಾತೆಯ ವಿಗ್ರಹದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಸ್ತಬ್ದ ಚಿತ್ರಗಳು ಶೋಭಾ ಯಾತ್ರಗೆ ಮೆರುಗು ನೀಡಿದವು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಆಚಾರ್ಯ ಮಠದ ಪಂಡಿತ್ ನರಸಿಂಹ ಆಚಾರ್ಯ, ಶ್ರೀ ವೆಂಕಟರಮಣ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ, ಸತೀಶ್ ಪ್ರಭು, ಗಣೇಶ್ ಕಾಮತ್ ಉಪಸ್ಥಿತರಿದ್ದರು.