Wednesday, November 27, 2024
ಸುದ್ದಿ

ಎಚ್​ಎಸ್​ಆರ್​ಪಿ ಅಳವಡಿಕೆ ವಿಸ್ತರಣೆ? 2 ಕೋಟಿ ವಾಹನ ಇರುವ ಕಾರಣ ನ.17 ಗಡುವು ಮುಂದಕ್ಕೆ – ಕಹಳೆ ನ್ಯೂಸ್

ಬೆಂಗಳೂರು: 2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್​ಗಳನ್ನು (ಎಚ್​ಎಸ್​ಆರ್​ಪಿ) ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಪುನಃ 2 ಅಥವಾ 3 ತಿಂಗಳು ವಿಸ್ತರಣೆ ಮಾಡಲು ಸಾರಿಗೆ ಇಲಾಖೆ ತೀರ್ವನಿಸಿದ್ದು, ನವೆಂಬರ್ ಮೊದಲ ವಾರದಲ್ಲಿ ಆದೇಶ ಹೊರಬೀಳಲಿದೆ.


ಎಚ್​ಎಸ್​ಆರ್​ಪಿ ಹಾಕಿಸಲು ಸಾರಿಗೆ ಇಲಾಖೆ ನ.17ರ ಗಡುವು ವಿಧಿಸಿತ್ತು. ಆದರೆ, ಹೊಸದಾಗಿ ನಾಮಫಲಕ ಅಳವಡಿಸಲು ವಾಹನ ಮಾಲೀಕರು ನಿರಾಸಕ್ತಿ ತೋರುತ್ತಿದ್ದಾರೆ. ಈವರೆಗೂ ರಾಜ್ಯದಲ್ಲಿ ಬರೀ 2.30 ಲಕ್ಷ ವಾಹನಗಳಿಗೆ ಮಾತ್ರ ಎಚ್​ಎಸ್​ಆರ್​ಪಿ ಅಳವಡಿಸಲಾಗಿದೆ. 1950ರಿಂದಲೂ ಆಗಿರುವ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ನಿಗದಿಪಡಿಸಿರುವ ನ.17ರ ಒಳಗೆ ಒಂದೂವರೆ ಕೋಟಿ ವಾಹನಗಳಿಗೆ ನಾಮಫಲಕ ಅಳವಡಿಕೆ ಸಾಧ್ಯವಿಲ್ಲ. ಹೀಗಾಗಿ 2 ಅಥವಾ 3 ತಿಂಗಳು ಅವಧಿ ವಿಸ್ತರಿಸುವ ಬಗ್ಗೆ ಅಧಿಕಾರಿಗಳ ಹಂತದಲ್ಲಿ ಮಾತುಕತೆ ನಡೆದಿದೆ. ಎಚ್​ಎಸ್​ಆರ್​ಪಿ ಅಳವಡಿಸಲು ರಾಜ್ಯಾದ್ಯಂತ 4000ಕ್ಕೂ ಅಧಿಕ ಡೀಲರ್ ಪಾಯಿಂಟ್​ಗಳನ್ನು ಸಾರಿಗೆ ಇಲಾಖೆ ಗುರುತಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಚಾರಣೆ 3 ವಾರ ಮುಂದಕ್ಕೆ: ವಕೀಲ ಗೌರಿಶಂಕರ್ ಎಂಬುವರು ನಂಬರ್ ಪ್ಲೇಟ್ ಅಳವಡಿಕೆ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್​ನಲ್ಲಿ ನಡೆಯಿತು. ನಂಬರ್ ಪ್ಲೇಟ್ ಅವಧಿ ವಿಸ್ತರಣೆಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಕಂಪನಿ ಪದಾಧಿಕಾರಿಗಳೊಂದಿಗೆ ನವೆಂಬರ್ ಮೊದಲ ವಾರದಲ್ಲಿ ಸಭೆ ನಿಗದಿಪಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠಕ್ಕೆ ತಿಳಿಸಿದರು. ಈ ಹಂತದಲ್ಲಿ ಯಾವುದೇ ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ವಿಚಾರಣೆಯನ್ನು 3 ವಾರ ಮುಂದೂಡಿತು.

ಪ್ಲೇಟ್ ಹಾಕಿಸುವುದೇಗೆ?: Transport.karnataka.gov.inಅಥವಾ www.siam.inಗೆ ಭೇಟಿ ಕೊಟ್ಟು ಬುಕ್ ಎಚ್​ಎಸ್​ಆರ್​ಪಿ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಬೇಕು. ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿಕೊಂಡರೆ ಅವರೇ ಬಂದು ಫಿಟ್ ಮಾಡುತ್ತಾರೆ.

ಎಚ್​ಎಸ್​ಆರ್​ಪಿ ಅಳವಡಿಕೆಗೆ ನಿಗದಿಪಡಿಸಿರುವ ಅವಧಿ ವಿಸ್ತರಣೆಗೆ ಸಚಿವರು ಈಗಾಗಲೆ ಒಪ್ಪಿಗೆ ನೀಡಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಸಭೆ ನಡೆಸಿ, ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ. ರಾಜ್ಯದಲ್ಲಿ ಈವರೆಗೆ ಬರೀ 2.30 ಲಕ್ಷ ವಾಹನಗಳಿಗೆ ಹೊಸ ಪ್ಲೇಟ್ ಅಳವಡಿಸಲಾಗಿದೆ.