Wednesday, November 27, 2024
ಸುದ್ದಿ

ಗರ್ಭಿಣಿ, ಬಾಣಂತಿ ಮಹಿಳೆಯರಿಗೆ 5,000 ರೂ ಪ್ರೋತ್ಸಾಹ ಧನ, ಅರ್ಜಿ ಆಹ್ವಾನಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ – ಕಹಳೆನ್ಯೂಸ್

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಪ್ರಕಾರ ಗರ್ಭಿಣಿ, ಬಾಣಂತಿಯರಿಗೆ ಪ್ರೋತ್ಸಾಹ ಧನ ನೀಡುವುದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಹ್ವಾನಿಸಿದೆ.

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ, ಬಾಣಂತಿ ಮಹಿಳೆಯರಿಗೆ 5,000 ರೂಪಾಯಿ ಪ್ರೋತ್ಸಾಹಧನ, ಎರಡನೇಪ್ರಸವದಲ್ಲಿ ಜನಿಸುವ ಹೆಣ್ಣು ಮಗುವಿಗೆ 6,000 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಾಯಿಗೆ ಆರ್ಥಿಕ ನೆರವು ಒದಗಿಸುವುದಕ್ಕಾಗಿ ಆಂಶಿಕ ಪರಿಹಾರ ರೂಪದಲ್ಲಿ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರೋತ್ಸಾಹ ಧನ ನೇರ ಖಾತೆಗೆ ತಾಯಿಗೆ ವಿಶ್ರಾಂತಿ ಒದಗಿಸಲು ಮತ್ತು ಆರೋಗ್ಯ ವರ್ಧನೆಗೆ ಪೂರಕ ಆಹಾರ ಪಡೆಯಲು ಪ್ರೋತ್ಸಾಹಧನವು ನೆರವಾಗಲಿದೆ. ಮಗುವಿನ ಆರೋಗ್ಯ ಕಾಪಾಡಲು, ಪೌಷ್ಟಿಕಾಂಶಯುತ ಆಹಾರ ನೀಡಲು ಇದು ಸಹಾಯವಾಗಲಿದೆ. ಈ ಪ್ರೋತ್ಸಾಹಧನವನ್ನು ನೇರ-ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಯ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ವರ್ಗಾಹಿಸಲಾಗುತ್ತದೆ. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರೋತ್ಸಾಹ ಧನ ಎಷ್ಟು ಮೊದಲನೇ ಪ್ರಸವದ ಗರ್ಭಿಣಿ, ಬಾಣಂತಿಗೆ ಮೊದಲ ಕಂತಿನಲ್ಲಿ 3,000 ರೂಪಾಯಿ ಮತ್ತು ಗರ್ಭಧಾರಣೆ ಖಾತರಿ ನಂತರ ಮೊದಲನೇ ಪ್ರಸವದ ಬಾಣಂತಿಗೆ ಎರಡನೇ ಕಂತಿನಲ್ಲಿ 2,000 ರೂಪಾಯಿಯನ್ನು ಮಗು ಜನಿಸಿದ ನಂತರ ನೀಡಲಾಗುತ್ತದೆ. ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ 3 ತಿಂಗಳ ನಂತರದಲ್ಲಿ 6,000 ರೂಪಾಯಿ ಪಡೆಯಲು ಅರ್ಹರಾಗಿರುತ್ತಾರೆ.

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್‌ನ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ (ಯಾವುದಾದರೂ ಒಂದು ನಕಲು ಪ್ರತಿ)ಪ್ರತಿ ಸಲ್ಲಿಸಬೇಕು.
ಈ ಬಗ್ಗೆ ಹೆಚ್ಚಿನ ಮಾಹಿತಿ ಗಾಗಿ ಹತ್ತಿರದ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.