ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಬಂಟ್ಟಾಳ ತಾಲೂಕು ಹಾಗೂ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇದರ ಜಂಟಿ ಆಶ್ರಯದಲ್ಲಿ 2 ದಿನಗಳ ಬಂಟ್ಟಾಳ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಶಿಬಿರವು ಇಂದು ಹಾಗೂ ನಾಳೆ ಆದಿತ್ಯವಾರ ರಂದು ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ಳಾಡು ಇಲ್ಲಿ ಜರಗಲಿರುವುದು.
ಈ ಶಿಬಿರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸ್ವರಚಿತ ಕವನ ಮತ್ತು ಕಥೆ ರಚನೆ, ಹಾಸ್ಯ ಸಾಹಿತ್ಯ, ಚಿತ್ರ ಸಾಹಿತ್ಯ , ಭಾಷಣ ಕಲೆ , ರಂಗಕಲೆ , ಚುಟುಕು ರಚನೆ ಇತ್ಯಾದಿ ವಿವಿಧ ವಿಷಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು.
1ನೇ ತರಗತಿಯಿಂದ ಪದವಿ ಪೂರ್ವ (ಪಿಯುಸಿ) ವರೆಗಿನ ವಿದ್ಯಾರ್ಥಿಗಳಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಬಂಟ್ಟಾಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.