ಚಿಕ್ಕಮಗಳೂರು: ಶಾಖಾದ್ರಿ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ; ಚಿರತೆ, ಜಿಂಕೆ ಚರ್ಮ ಅಧಿಕಾರಿಗಳ ವಶಕ್ಕೆ – ಕಹಳೆ ನ್ಯೂಸ್
ಚಿಕ್ಕಮಗಳೂರು: ರಾಜ್ಯಾದ್ಯಾಂತ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ಶಾಖಾದ್ರಿ ಮನೆ ಮೇಲೆ ದಾಳಿ ನಡೆಸಿದ ಚಿಕ್ಕಮಗಳೂರು ಅರಣ್ಯಾಧಿಕಾರಿ ಅವರ ನೇತೃತ್ವದ ತಂಡದಿAದ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ಬಾಬಾ ಬುಡನ್‌ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ಎಸಿಎಫ್ ಮೋಹನ್ ಮಾಹಿತಿ ನೀಡಿದ್ದಾರೆ.ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿನ ಶಾಖಾದ್ರಿ ಗೌಸ್ ಮೋಯಿದ್ದೀನ್ ಅವರ ಮನೆಯಲ್ಲಿ ಅಧಿಕಾರಿಗಳು ಶುಕ್ರವಾರ ಪರಿಶೀಲನೆ ಕೈಗೊಂಡಿದ್ದರು.
ಆದರೆ, ಈ ವೇಳೆ ಶಾಖಾದ್ರಿ ಮನೆಯಲ್ಲಿ ಇರಲಿಲ್ಲ. ಮನೆಯ ಬಾಗಿಲು ಲಾಕ್ ಆಗಿದ್ದ ಕಾರಣ 10 ಗಂಟೆಗೂ ಅಧಿಕ ಕಾಲ ಕಾದು ಕುಳಿತ ಅಧಿಕಾರಿಗಳು ಸಂಬAಧಿಕರೊಬ್ಬರ ಮೂಲಕ ಮನೆಯ ಕೀ ತರಿಸಿಕೊಂಡಿದ್ದರು. ಬೆಂಗಳೂರಿನಿAದ ಬಂದ ಬಸ್‌ನಲ್ಲಿ ಕೀ ತರಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮನೆಯ ಕೀ ಬಂದ ಬಳಿಕ ಶಾಖಾದ್ರಿ ಅನುಪಸ್ಥಿತಿಯಲ್ಲಿ, ಅವರ ಸಂಬAಧಿಕರ ಸಮ್ಮುಖದಲ್ಲಿ ಮನೆ ತಪಾಸಣೆ ನಡೆಸಲಾಗಿದೆ. ಈ ವೇಳೆ ಮನೆಯಲ್ಲಿ ಒಂದು ಚಿರತೆ ಹಾಗೂ ಒಂದು ಜಿಂಕೆ ಚರ್ಮ ಪತ್ತೆಯಾಗಿದೆ. ಎರಡು ಪ್ರಾಣಿಯ ಚರ್ಮವನ್ನು ವಶಕ್ಕೆ ಪಡೆದಿದ್ದು, ಎಫ್.ಎಸ್.ಎಲ್. ವರದಿಗೆ ಚರ್ಮವನ್ನು ಕಳುಹಿಸಲಾಗುವುದು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡುತ್ತೇವೆ. ಬಳಿಕ ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.