Wednesday, November 27, 2024
ಸುದ್ದಿ

ವಿದ್ಯಾರ್ಥಿ ವೇತನ ನೀಡದೆ ಸತಾಯಿಸುತ್ತಿರುವ ರಾಜ್ಯ ಸರ್ಕಾರ: ಎಬಿವಿಪಿ ಉಡುಪಿ ವತಿಯಿಂದ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆ – ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದೆ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಜ್ಜರಕಾಡಿನ ಯುದ್ಧ ಸ್ಮಾರಕದ ಬಳಿ ಪ್ರತಿಭಟನೆಯನ್ನು ಸಾಂಕೇತಿಕವಾಗಿ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೊದಲಿಗೆ ನಗರ ಕಾರ್ಯದರ್ಶಿ ಶ್ರೀವತ್ಸ ಅವರು ಮಾತನಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ವಿಶೇಷವಾಗಿ ಉಡುಪಿ ದಕ್ಷಿಣ ಕನ್ನಡ ಭಾಗದ ಮನೆಗಳಲ್ಲಿ ಬೀಡಿ ಕಟ್ಟಿ ಜೀವನ ನಡೆಸುವವರ ಬಡ ಮಕ್ಕಳಿಗೆ ಬರುವ ವಿದ್ಯಾರ್ಥಿ ವೇತನ ಬಾರದೆ ಇರುವುದು ಅವಶ್ಯಕ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆ ಆಗುತ್ತಿದೆ.

ನಂತರ ನಗರ ಕಾರ್ಯಕಾರಿಣಿ ಸದಸ್ಯರಾದ ಮಂಗಳಗೌರಿ ಅವರು ಮಾತನಾಡಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಹಾಗೂ ಇತರೆ ಇಲಾಖೆಯಡಿಯಲ್ಲಿ ಬರುವ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಾರದೆ ಉಡುಪಿಯು ಸೇರಿದಂತೆ ರಾಜ್ಯಾದ್ಯಂತ ಸುಮಾರು ನಾಲ್ಕು ಲಕ್ಷ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ವಂಚಿರಾಗುತ್ತಿರುವುದು ಖಂಡನಿಯಬೆಂದು ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ ಅವರು ಮಾತನಾಡಿ ರಾಜ್ಯ ಸರ್ಕಾರ ತನ್ನ ಗ್ಯಾರಂಟೀ ಮೂಲಕ ನಿರುದ್ಯೋಗಿಗಳಿಗೆ ಬತ್ತೆ ನೀಡುವುದರ ಬದಲು ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಬರುವಂತಹ ವಿದ್ಯಾರ್ಥಿ ವೇತನವನ್ನು ನೀಡಿದರೆ ನಿರುದ್ಯೋಗದ ಸಮಸ್ಯೆ ಉಲ್ಬಣವಾಗುವ ಮಾತೇ ಇರುವುದಿಲ್ಲ. ಕೊನೆಯಲ್ಲಿ ಅವರು ಮಾತನಾಡಿ, ಒಂದು ವೇಳೆ ನಾಳೆ ಉಡುಪಿಗೆ ಬರಲಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಒಂದು ವಾರದೊಳಗಾಗಿ ಸಮಸ್ಯೆಗೆ ಪರಿಹಾರ ವದಗಿಸದೇ ಹೋದಲ್ಲಿ ಉಡುಪಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.