ಅವಿವಾಹಿತ, ವಿಚ್ಛೇದಿತ ಮಹಿಳೆಯರಿಗೆ ಗುಡ್ ನ್ಯೂಸ್: ಮನಸ್ವಿನಿ ಯೋಜನೆ ಜಾರಿ, ಪ್ರತಿ ತಿಂಗಳು 500 ಮಾಸಾಶನ – ಕಹಳೆ ನ್ಯೂಸ್
ರಾಜ್ಯ ಸರ್ಕಾರದಿಂದ ಅವಿವಾಹಿತ, ವಿಚ್ಛೇದಿತ ಮಹಿಳೆಯರಿಗಾಗಿ ಮನಸ್ವಿನಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಮಾಸಾಶನ ಸೌಲಭ್ಯವನ್ನು ಕಲ್ಪಿಸೋದಾಗಿ ಸರ್ಕಾರ ತಿಳಿಸಿದೆ.
40 ವರ್ಷದಿಂದ 64 ವರ್ಷದೊಳಗಿನ ವಿಚ್ಚೇದಿತ ಮತ್ತು ಅವಿವಾಹಿತ ಮಹಿಳೆಯರ ಸ್ವಾವಲಂಬಿ ಬದುಕಿಗೆ ಬೆಂಬಲವಾಗಿ ನಿಲ್ಲಬೇಕೆಂಬ ಉದ್ದೇಶದೊಂದಿಗೆ ಸರ್ಕಾರವು ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದೆ.
ಬಡತನರೇಖೆಗಿAತ ಕೆಳಗಿರುವ ವಿಚ್ಚೇದಿತ ಮತ್ತು ಅವಿವಾಹಿತ ಮಹಿಳೆಯರಿಗೆ ಮಾಸಿಕ ರೂ.500 ಮಾಸಾಶನ ನೀಡುವ ಈ ಯೋಜನೆಗೆ ಪಸಕ್ತ ಬಜೆಟ್ ನಲ್ಲಿ ರೂ.138 ಕೋಟಿ ಅನುದಾನವನ್ನು ನೀಡಲಾಗಿದೆ. ಸಮಾಜದ ಪ್ರತಿಯೊಂದು ದುರ್ಬಲ ವರ್ಗವನ್ನು ಗುರುತಿಸಿ, ಆ ಸಮುದಾಯವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸಲು ಸರ್ಕಾರವು ಬದ್ಧವಾಗಿದೆ ಅಂತ ಹೇಳಿದೆ.
ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ಸರ್ಕಾರವು ಬದ್ಧವಾಗಿದೆ. ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮತ್ತು ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿ, ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದೇವೆ ಅಂತ ತಿಳಿಸಿದೆ.