Monday, January 20, 2025
ಸುದ್ದಿ

ಬೆಳ್ತಂಗಡಿ: ಸೌಹಾರ್ಧತೆಗೆ ಧಕ್ಕೆಯಾಗುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರ ವಿರುದ್ಧ ಎಫ್‌ಐಆರ್‌ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಹಾಕಿದ ಬ್ಯಾನರ್ ಗಳ ಸಮೀಪ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧಕ್ಕೆ ಬಾಧಕವಾಗುವಂತಹ ಬರವಣಿಗೆ ಇರುವ ಬ್ಯಾನರ್ ಅಳವಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಸಂದೀಪ್ ರೈ ನೀಡಿರುವ ದೂರಿನ ಮೇರೆಗೆ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅ.29ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್‌ಗಳ ಸಮೀಪದಲ್ಲೇ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್‌ಗಳನ್ನು ಅಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ, ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ದತೆಯನ್ನು ಸೃಷ್ಟಿಸಿರುವುದಾಗಿ ಸಂದೀಪ್ ರೈ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು