Monday, January 20, 2025
ಸುದ್ದಿ

ರಾಷ್ಟಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ತೃತೀಯ ಸ್ಥಾನ – ಕಹಳೆ ನ್ಯೂಸ್

ಪುತ್ತೂರು, ; ರಾಜಸ್ಥಾನದ ಜೋಧಪುರ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ತಂಡದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.