Monday, January 20, 2025
ಸುದ್ದಿ

ವಿದ್ಯಾಭಾರತಿ ರಾಷ್ಟ್ರಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ತೃತೀಯ – ಕಹಳೆ ನ್ಯೂಸ್

ಪುತ್ತೂರು, : ಅರುಣಾಚಲ ಪ್ರದೇಶದ ನಹರ್ಲಾಂಗನ್‌ನಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ತಂಡದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್ ಭಾಗವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ, ಯತೀಶ್ ಬಾರ್ತಿಕುಮೆರ್ ಇವರ ಮಾರ್ಗದರ್ಶನದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು