Tuesday, January 21, 2025
ಸುದ್ದಿ

ಮಾಣಿ ; ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿ. ಇದರ 113ನೇ ನೂತನ ಶಾಖೆ ಉದ್ಘಾಟನೆ – ಕಹಳೆ ನ್ಯೂಸ್

ಮಾಣಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಮಾಣಿ ಶಾಖೆಯ ಉದ್ಘಾಟನಾ ಸಮಾರಂಭವು ಇಂದು ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ ನ ಪ್ರಥಮ ಅಂತಸ್ತಿನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ.ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭಾಕಾರ್ಯಕ್ರಮದಲ್ಲಿ ನವೋದಯ ಸ್ವಸಹಾಯ ಸಂಘದ ಸದಸ್ಯರಿಗೆ ಮಾಣಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಇಬ್ರಾಹಿಂ ಕೆ. ಮಾಣಿಯವರು ಸಾಲ ಪತ್ರ ಹಸ್ತಾಂತರಿಸಿದರು.

ನಂತರ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಹಲವಾರು ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರವರಿಗೆ ಹಾಗೂ ಶಾಖಾ ಕಟ್ಟಡದ ಮಾಲಕರಾದ ಎಮ್. ನಾರಾಯಣ ಪೈ ರವರಿಗೆ ಸನ್ಮಾನಿಸಲಾಯಿತು . ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.