Thursday, January 23, 2025
ಸುದ್ದಿ

ಮೂಡುಬಿದಿರೆಯಲ್ಲಿ ವಿಶೇಷ ಚೇತನರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ – ಕಹಳೆ ನ್ಯೂಸ್

ಮೂಡುಬಿದಿರೆ : ದ.ಕ ಜಿಪಂ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವುಗಳ ಸಹಯೋಗದೊಂದಿಗೆ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ನಡೆದ ದ.ಕ ಜಿಲ್ಲಾ ಮಟ್ಟದ ವಿಶೇಷ ಸಾಮಥ್ಯದ ಮಕ್ಕಳ ಕ್ರೀಡಾ ಕೂಟಕ್ಕೆ ಮೂಡುಬಿದಿರೆ ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ್ ಬಿ.ಚಾಲನೆಯನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಮಾತನಾಡಿದ ಅವರು ವಿಶೇಷ ಸಾಮಥ್ಯದ ಮಕ್ಕಳಲ್ಲಿ ವಿಶೇಷವಾದ ಪ್ರತಿಭೆಯಿದೆ. ಅವಕಾಶ ಸಿಕ್ಕಿದರೆ ಅವರು ಸಾಮಾನ್ಯ ಮಕ್ಕಳಿಗಿಂತಲೂ ಹೆಚ್ಚಿನ ಸಾಧನೆಯನ್ನು ಮಾಡಬಲ್ಲರು. ಇದರಿಂದಾಗಿ ಪ್ಯಾರಾ ಏಷ್ಯಾನ್ ಕ್ರೀಡಾಕೂಟದಲ್ಲಿ ದೇಶಕ್ಕೆ 111 ಪದಕಗಳು ಗಳಿಸಲು ಸಾಧ್ಯವಾಯಿತು ಎಂದ ಅವರು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಿ ಹೆಚ್ಚಿನ ಸಾಧನೆಯನ್ನು ಮಾಡುವಂತ್ತಾಗಲಿ ಎಂದು ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ವಿಶೇಷ ಸಾಮಥ್ಯ 9ವುಳ್ಳ ಮಕ್ಕಳಿಗೆ ಆತ್ಮವಿಶ್ವಾಸವನ್ನು ತುಂಬಿ ಕ್ರೀಡಾ ಮನೋಭಾವವನ್ನು ಬೆಳೆಸುವ ಜೊತೆಗೆ ಶಾರೀರಿಕವಾಗಿ, ಮಾನಸಿಕವಾಗಿ ಸಾಮಥ್ಯವನ್ನು ಹೆಚ್ಚಿಸಬೇಕು ಎಂದ ಅವರು ಸೋಲು ಗೆಲವನ್ನು ಸಮಾನವಾಗಿ ಸ್ವೀಕರಿಸಿ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.

ದ.ಕ.ಜಿಲ್ಲಾ ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ಉಪ ಸಮನ್ವಯಾಧಿಕಾರಿ ಡಾ.ಸುಮಂಗಲಾ ಎಸ್.ನಾಯಕ್ ಅವರು ಮಾತನಾಡಿ ಅಂಗನ್ಯೂನತೆ ಇರುವ ಮಕ್ಕಳಲ್ಲಿ ವಿಶೇಷವಾದ ಸಾಮಥ್ಯ 9ವಿದೆ ಆದ್ದರಿಂದ ಅವರಿಗೆ ಅವಕಾಶ ನೀಡಿ ಅನುಕಂಪ ಬೇಡವೆಂದರು. ರೋಟರಿ ಅಂಗ್ಲ ಮಾಧ್ಯಮ ಸಂಚಾಲಕ ಪ್ರವೀಣ್‌ಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು.
ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಸರಿತಾ ಆಶೀರ್ವಾದ್, ಎಂಸಿಸಿ ಬ್ಯಾಂಕಿನ ನಿರ್ದೇಶಕ ಆ್ಯಂಡ್ರ‍್ಯೂ ಡಿ’ಸೋಜಾ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಕೆ., ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನಾಗೇಶ್ ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೂಡುಬಿದಿರೆ ತಾಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷನಾಧಿಕಾರಿ ನಿತ್ಯಾನಂದ ಶೆಟ್ಟಿ, ನಿರ್ಗಮನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರಾಜಶ್ರೀ, ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಸೌಮ್ಯ, ಪ್ಲೇವಿಯಾ ಮತ್ತಿತರರು ಉಪಸ್ಥಿತರಿದ್ದರು.

ರೋಟರಿ ಅಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯಿನಿ ತಿಲಕ ಅನಂತವೀರ ಜೈನ್ ಸ್ವಾಗತಿಸಿದರು. ದೈ.ಶಿ.ಶಿ. ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕ ಸುಧೀರ್ ಕುಮಾರ್ ವಂದಿಸಿದರು.