ನ್ಯಾಯಬೆಲೆ ಅಂಗಡಿ ಮಾಲೀಕರಿಂದ ರೇಷನ್ ಎತ್ತುವಳಿ ಸ್ಥಗಿತ: ಈ ತಿಂಗಳು ಪಡಿತರ ವಿಳಂಬ ಸಾಧ್ಯತೆ ಪಡಿತರ ಚೀಟಿದಾರರಿಗೆ ಸಮಸ್ಯೆ -ಕಹಳೆ ನ್ಯೂಸ್
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ರೇಷನ್ ಎತ್ತುವಳಿ ಸ್ಥಗಿತಗೊಳಿಸಿದ್ದಾರೆ. ಹೀಗಾಗಿ ಪಡಿತರ ಚೀಟಿದಾರರಿಗೆ ಪ್ರಸಕ್ತ ತಿಂಗಳಿನಲ್ಲಿ ಪಡಿತರ ಪಡೆಯಲು ವಿಳಂಬವಾಗುವ ಸಾಧ್ಯತೆ ನವೆಂಬರ್ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರು ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.
ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆಹಾರ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಮೂರ್ನಾಲ್ಕು ಬಾರಿ ಸಭೆ ನಡೆಸಿದ್ದರೂ ಸಮಸ್ಯೆಯನ್ನು ಬಗೆಹರಿಸಿಲ್ಲ. ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಒತ್ತಾಯಿಸಿದ್ದಾರೆ.
ಪಡಿತರ ಚೀಟಿದಾರರಿಗೆ ಅಕ್ಕಿ ಬದಲು ಹಣ ನೀಡುವುದರಿಂದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಮಿಷನ್ ಸಿಗುತ್ತಿಲ್ಲ. ಹೀಗಾಗಿ ಎಲ್ಲರಿಗೂ 10 ಕೆಜಿ ಅಕ್ಕಿಯನ್ನೇ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಬಡ ಕುಟುಂಬ ದ ಅದಾರ ವಾಗಿ ರುವ ಪಡಿತರ ವಿತರಣೆ ಆದಷ್ಟು ಬೇಗ ಬಗೆಹರಿಯಲಿ ಎಂಬುದೇ ಎಲ್ಲರ ಆಶಯ.