Monday, November 25, 2024
ಸುದ್ದಿ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಕೇಸ್ ; 7 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಬೆಂಗಳೂರು ಸಿಸಿಬಿ ಸಿದ್ಧತೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಚೈತ್ರಾ ಸೇರಿದಂತೆ ಮತ್ತಿತರರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಮುಂದಾಗಿದ್ದಾರೆ. ವಂಚನೆ ಕುರಿತು 68 ಸಾಕ್ಷ್ಯಗಳನ್ನು ಕಲೆ ಹಾಕಿರುವ ಸಿಸಿಬಿ, ಆರೋಪಿಗಳ ವಿರುದ್ಧ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಈಗಾಗಲೇ ಪೊಲೀಸರು 4 ಕೋಟಿ 11 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿದ್ದಾರೆ. ಪ್ರಾಥಮಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯ, ಸಾಂದರ್ಭಿಕ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಪ್ರಮುಖ ಆರೋಪಿಗಳಾದ ಚೈತ್ರಾ, ಶ್ರೀಕಾಂತ್, ಗಗನ್ ಕಡೂರು, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ಸಿಸಿಬಿ ಮೂಲಗಳು ಹೇಳಿವೆ.
ದೂರುದಾರ ಗೋವಿಂದ ಬಾಬು ಪೂಜಾರಿ ಅವರಿಂದ ಪಡೆಯಲಾದ ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಫೋನ್‌ಗಳಿಂದ ರಿಟ್ರೀವ್ ಮಾಡಲಾದ ವರದಿಯನ್ನು ಕೂಡ ಚಾರ್ಜ್ಶೀಟ್‌ನಲ್ಲಿ ದಾಖಲಿಸಲಾಗಿದೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಉದ್ಯಮಿ ಗೋವಿಂದ ಬಾಬು ವಿರುದ್ಧ ಇಡಿಗೆ ದೂರು: ಈ ನಡುವೆ, ಪ್ರಕರಣದ ದೂರದಾರನಿಗೆ 5 ಕೋಟಿ ರೂಪಾಯಿ ಎಲ್ಲಿಂದ ಬಂದಿದೆ ಎನ್ನುವ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ವಕೀಲರೊಬ್ಬರು ಜಾರಿ ನಿರ್ದೇಶನಾಲಯಕ್ಕೆ ಇತ್ತೀಚೆಗೆ ದೂರು ನೀಡಿದ್ದರು. ಗೋವಿಂದ ಬಾಬು ಪೂಜಾರಿ ತಮ್ಮ ದೂರಿನಲ್ಲೇ 5 ಕೋಟಿ ನಗದು ಹಣ ಕೊಟ್ಟಿರುವುದಾಗಿ ಹೇಳಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತದ ಹಣ ಹವಾಲಾ ಮಾರ್ಗದಿಂದ ಬಂದಿರುವ ಕುರಿತು ದೂರುದಾರರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ತನಿಖೆ ಮಾಡಿ ಹಣದ ಬಗ್ಗೆ ವಿಚಾರಣೆ ನಡೆಸಬೇಕು. ಬ್ಯಾಂಕ್‌ನಿAದ ಸಾಲ ಪಡೆದಿರುವುದಾಗಿ ಗೋವಿಂದ್ ಪೂಜಾರಿ ಹೇಳಿದ್ದಾರೆ. ಹಣವನ್ನು ಸಾಲ ಪಡೆದು ಈ ರೀತಿ ಬಳಸಿಕೊಳ್ಳುವುದು ಕೂಡ ತಪ್ಪು ಆಗಿದೆ. ಇವರು ಮುಂಬೈನಲ್ಲಿ ಉದ್ಯಮ ಮಾಡುತ್ತಿರುವುದರಿಂದ ಇದು ಹವಾಲಾ ವಹಿವಾಟು ಎಂಬುದರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ವಕೀಲ, ಸೆ.21ರಂದು ಇಡಿಗೆ ದೂರು ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು