Friday, January 24, 2025
ಸುದ್ದಿ

ಮೋದಿಗೆ ಗಿಫ್ಟ್ ಭರ್ಜರಿ ನೀಡಿದ ಕಾಫಿನಾಡಿನ ಅಂಧ ಕ್ರೀಡಾಪಟು ರಕ್ಷಿತಾ ರಾಜು – ಕಹಳೆ ನ್ಯೂಸ್

ಮಂಗಳೂರು : ಚಿಕ್ಕಮಗಳೂರಿನ ಅಂಧ ಕ್ರೀಡಾಪಟು ರಕ್ಷಿತಾ ರಾಜು ಅವರು ಪ್ರಧಾನಿ ಮೋದಿ ಅವರಿಗೆ ಗಿಫ್ಟ್ ನೀಡಿದ್ದಾರೆ.


ದೆಹಲಿಯಲ್ಲಿ ಪ್ಯಾರಾ ಗೇಮ್ಸ್ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ, ರಕ್ಷಿತಾ ರಾಜು ಪ್ರಧಾನಿ ಮೋದಿಗೆ ಮಹತ್ವದ ಉಡುಗೊರೆಯನ್ನು ನೀಡಿದ್ದಾರೆ. ಕಳೆದ ವರ್ಷ ಪ್ಯಾರಿಸ್‌ನಲ್ಲಿ ನಡೆದ ಕ್ರೀಡಾಕೂಟದಲ್ಲಿ 5ನೇ ಸ್ಥಾನವನ್ನು ರಕ್ಷಿತಾ ಪಡೆದುಕೊಂಡಿದ್ದರು. ಅಂಧ ಯುವತಿಯಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಖುಷಿ ಪಟ್ಟು ಪ್ಯಾರಾ ಒಲಿಂಪಿಕ್ಸ್ನಲ್ಲೂ ಚಿನ್ನ ಗೆಲ್ಲುವಂತೆ ಹಾರೈಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡಿಗೆರೆ ತಾಲೂಕಿನ ಗುಡ್ನಳ್ಳಿ ಸಮೀಪದ ಅಂಧ ಯುವತಿ ರಕ್ಷಿತಾ ರಾಜು ಅವರು, ಕಳೆದ ತಿಂಗಳು ಚೀನಾದ ಹಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ 1500 ಮೀಟರ್ ಓಟವನ್ನ 5.21 ಸೆಕೆಂಡ್‌ಗೆ ಓಡುವ ಮೂಲಕ ಚಿನ್ನದ ಸಾಧನೆ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು