Tuesday, November 26, 2024
ಸುದ್ದಿ

ಮೂಡುಬಿದಿರೆಯಲ್ಲಿ ಪ.ಪೂ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ – ಕಹಳೆ ನ್ಯೂಸ್

ಮೂಡುಬಿದಿರೆ : ವಿದ್ಯಾರ್ಥಿಗಳು ಕಲಿಕೆ ಜತೆಗೆ ಕ್ರೀಡೆಗೂ ಆದ್ಯತೆಯನ್ನು ನೀಡಬೇಕು. ಪಠ್ಯದಲ್ಲಿ ಸಾಧನೆ ಮಾಡಿದಂತೆ ಕ್ರೀಡೆಯಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು.

ಅವರು ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯೂ ವೈಬ್ರೆಂಟ್ ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾರಿವಾಳವನ್ನು ಬಾನೆತ್ತರಕ್ಕೆ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ರೀಡೆಯಲ್ಲಿ ಸೋಲು ಗೆಲವು ಇರುತ್ತದೆ. ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಆಟವಾಡಿ. ಸೋತರೆ ಹತಾಶರಾಗಬೇಡಿ ಎಂದು ಕಿವಿ ಮಾತು ಹೇಳಿದ ಅವರು ಕೇಂದ್ರ ಸರ್ಕಾರವು ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ ರೀತಿ ರಾಜ್ಯ ಸರ್ಕಾರವೂ ಕ್ರೀಡಾಚಟುವಟಿಕೆಗಳಿಗೆ ಅನುದಾನ ಒದಗಿಸಬೇಕೆಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಣ್ಣ ಮಾತನಾಡಿ ಪಠ್ಯದ ಜತೆಗೆ ಪಠ್ಯೇತರ ವಿಷಯಗಳಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನ ಸಂಪಾದಿಸುತ್ತಾರೆ. ಕ್ರೀಡಾ ಸ್ಪೂರ್ತಿ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.

ನ್ಯೂ ವೈಬ್ರಂಟ್ ಕಾಲೇಜಿನ ಪ್ರಾಚಾರ್ಯ ಎಸ್.ಎನ್ ವೆಂಕಟೇಶ್ ನಾಯಕ್ ಅಧ್ಯಕ್ಷತೆ ವಹಿಸಿದರು.
ನ್ಯೂ ವೈಬ್ರೆಂಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ
ಟ್ರಸ್ಟಿಗಳಾದ ಶರತ್‌ಗೋರೆ, ಯೋಗೀಶ್ ಬೆಡೇಕರ್, ಮೆಹಬೂಬ ಬಾಷಾ, ಕ್ರೀಡಾಸಂಯೋಜಕ ನವೀನ್ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಸಂಘಟನಾ ಕಾರ್ಯದರ್ಶಿ, ವೈಬ್ರೆಂಟ್ ಕಾಲೇಜಿನ ಆಡಳಿತಾಧಿಕಾರಿ ಅರುಣ್ ಡಿಸಿಲ್ವ ಸ್ವಾಗತಿಸಿದರು. ನ್ಯೂ ವೈಬ್ರೆಂಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಚಂದ್ರಶೇಖರ ರಾಜೇ ಅರಸ್ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಹರೀಶ್ ನಂಬಿಯರ್ ಪ್ರತಿಜ್ಞಾವಿಧಿ ಬೋಧಿಸಿದರು.
ಉಪನ್ಯಾಸಕ ಅರುಣಾ ಕಾರ್ಯಕ್ರಮ ನಿರ್ವಹಿಸಿದರು. ಧನುಶ್ರೀ ವಂದಿಸಿದರು.