Monday, January 20, 2025
ಅಂತಾರಾಷ್ಟ್ರೀಯಸುದ್ದಿ

ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಪಣತೊಟ್ಟ ಇಸ್ರೇಲ್‌ ; ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಅಲ್-ಮಘಾಝಿ ಉಗ್ರರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ, 30 ಮಂದಿ ಮಟಾಶ್..! – ಕಹಳೆ ನ್ಯೂಸ್

ಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ ಮುಂದುವರೆದಿದ್ದು, ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್‌ ಪಣತೊಟ್ಟಿದೆ. ಅದರಂತೆ ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಶಿಬಿರವೊಂದರ ಮೇಲೆ ನಡೆಸಿದ ವಾಯು ದಾಳಿಯಲ್ಲಿ ಸುಮಾರು 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ತಿಳಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಸೆಂಟ್ರಲ್‌ ಗಾಜಾ ಪಟ್ಟಿಯಲ್ಲಿರುವ ಅಲ್-ಮಘಾಝಿ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ದೇರ್ ಅಲ್-ಬಾಲಾಹ್‌ನಲ್ಲಿರುವ ಅಲ್-ಅಕ್ಸಾ ಮಾರ್ಟಿಯರ್ಸ್‌ ಆಸ್ಟತ್ರೆಗೆ ಸಾಗಿಸಲಾಗಿದೆ. ಈ ವೈಮಾನಿಕ ದಾಳಿಯಿಂದಾಗಿ ಹಲವು ಮನೆಗಳು ನೆಲಕ್ಕುರುಳಿವೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಮಾಸ್ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಇಸ್ರೇಲ್ ನಾಗರಿಕರ ಮನೆಗಳ ಮೇಲೆ ನೇರವಾಗಿ ದಾಳಿ ಮಾಡಿದ್ದು, ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ಹೇಳಿದೆ.

ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ, 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್‌ ಅನ್ನು ನಾಶ ಮಾಡುತ್ತೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ.