ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಸಾಹಿತ್ಯ ಪರಿಷತ್ತು ಇದರ ಆಶ್ರಯದಲ್ಲಿ ಬಂಟಕಲ್ಲು ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ “ಕಾಪು ತಾಲೂಕು ಮಟ್ಟದ 5ನೇ ಕನ್ನಡ ಸಾಹಿತ್ಯ ಸಮ್ಮೇಳನ” ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ಅತಿಥಿ ದೇವೋ ಭವ ಎಂಬ ಸಂಸ್ಕೃತಿ ನಮ್ಮದು. ಭಾರತ ಹಲವು ಸಂಸ್ಕೃತಿ ಮತ್ತು ಭಾಷೆಯನ್ನು ಹೊಂದಿರುವ ದೇಶ ಅದರಲ್ಲಿ ನಮ್ಮ ಕರ್ನಾಟಕ ವಿಷೇಶ ಎಂದು ಹೇಳಿದ ಅವರು ಕನ್ನಡ ನಾಡು ಮತ್ತು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದ್ದು ಎಂದರು.
ಈ ಸಂದರ್ಭದಲ್ಲಿ ಸಮ್ಮೇಳನ ಅಧ್ಯಕ್ಷರಾದ ಕೆ.ಎಸ್. ಶ್ರೀಧರಮೂರ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಂಟಕಲ್ಲು ಪುಂಡಲೀಕ ಮರಾಠೆ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ರಾಜೇಶ್, ಬಂಟಕಲ್ಲು ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾl ತಿರುಮಲೇಶ್ವರ ಭಟ್, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಮತ್ತು ದೇವಸ್ಥಾನ ಆಡಳಿತ ಮೊಕ್ತೇಸರರು ಮತ್ತು ಧರ್ಮಗುರುಗಳು ಉಪಸ್ಥಿತರಿದ್ದರು.