Recent Posts

Sunday, January 19, 2025
ಸುದ್ದಿ

ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಅಂಚೆ ಇಲಾಖೆಯ ಸೇವೆಗಳ ಮಾಹಿತಿ ಅಭಿಯಾನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ – ಕಹಳೆ ನ್ಯೂಸ್

ಗುರ್ಮೆ ಫೌಂಡೇಶನ್, ಗುರ್ಮೆ ಕಳತ್ತೂರು, ಬಿಜೆಪಿ ಮಹಾಶಕ್ತಿ ಕೇಂದ್ರ, ಉದ್ಯಾವರ, ಶ್ರೀನಿವಾಸ ಆಸ್ಪತ್ರೆ ಮುಕ್ಕಾ, ಸುರತ್ಕಲ್, ಮಂಗಳೂರು ಇವರ ಆಶ್ರಯದಲ್ಲಿ ಉದ್ಯಾವರ ಸೌಂದರ್ಯ ಹಾಲ್ ನಲ್ಲಿ ಆಯೋಜಿಸಲಾದ “ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಅಂಚೆ ಇಲಾಖೆಯ ಸೇವೆಗಳ ಮಾಹಿತಿ ಅಭಿಯಾನ”ವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಉಪಾಧ್ಯಕ್ಷರಾದ ನವೀನ್ ಎಸ್.ಕೆ, ಶ್ರೀನಿವಾಸ ಆಸ್ಪತ್ರೆಯ ಶಶಿರಾಜ್ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಸಚೀನ್ ಸುವರ್ಣ, ಉದ್ಯಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.