Friday, January 24, 2025
ಸುದ್ದಿ

ಫಾರ್ಚೂನ್ ಆಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಕಾರ್ಯಕ್ರಮ – ಕಹಳೆ ನ್ಯೂಸ್

ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್  ಪದವಿ ಪ್ರದಾನ ಸಮಾರಂಭ ಮಾಬುಕಳ  ಫಾರ್ಚೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಇದರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮವು ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮಾರಂಭದ ಮುಖ್ಯ ಅತಿಥಿಯಾಗಿ ಡಾ| ಗಣಪತಿ ಹೆಗ್ಡೆ, ಅರೆವಳಿಕೆ ತಜ್ಞರು, ಸರಕಾರಿ ಆಸ್ಪತ್ರೆ, ಉಡುಪಿ ಇವರು ಆಗಮಿಸಿ ಬಿ.ಎಸ್ಸಿ. ನಸಿರ್ಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಅತಿಥಿಯಾಗಿ ಶ್ರೀ ಹೆಚ್. ಇಬ್ರಾಹಿಂ ಸಾಹೇಬ್, ಕಾರ್ಯದರ್ಶಿ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕøತಿಕ ಸಂಸ್ಥೆ (ರಿ.), ಹಂಗಾರಕಟ್ಟೆ, ಇವರು ಪ್ಯಾರಮೆಡಿಕಲ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ನೀಡಿ, ಮುಂದಿನ ಭವಿಷ್ಯಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ದೈವಿಕ್ ಟಿ. ಶೆಟ್ಟಿ, ಅಧ್ಯಕ್ಷರು, ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್, ಬ್ರಹ್ಮಾವರ ನಿರ್ವಹಿಸಿದ್ದರು. ಕಾಲೇಜಿನ ಮೊದಲ ಪದವಿ ಪ್ರದಾನದ ಕುರಿತು ಸಂತೋಷ ವ್ಯಕ್ತಪಡಿಸಿದರು. ಕಾಲೇಜಿನ ಅಂತಿಮ ಬಿ.ಎಸ್ಸಿ. ಪದವೀಧರರಿಂದ ದೊರೆತ 96.55% ಫಲಿತಾಂಶದ ಬಗೆಗೆ ವಿದ್ಯಾರ್ಥಿಗಳಿಗೆ ವಂದನೆ ತಿಳಿಸಿ, ಖಚಿತ 100% ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುವ ಬಗೆಗೆ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಚೇರ್ ಮ್ಯಾನ್ ಶ್ರೀ ತಾರನಾಥ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿಯರಾದ ವೀಣಾ ಮತ್ತು ಅಂಬಿಕಾ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸ್ಮಿತಾಮೋಲ್ ಕಾರ್ಯಕ್ರಮದ ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಪದವೀಧರ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ನೀಡಿದರು.

ಸಹ ಪ್ರಾಧ್ಯಾಪಕಿ ಶ್ರೀಮತಿ ಸೆಲ್ಮಾ ಲೂವಿಸ್ ಇವರು ಅತಿಥಿಗಳಿಗೆ ಧನ್ಯವಾದ ಸದುರ್ಪಿಸಿದರು. ತದನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.