Friday, January 24, 2025
ಸುದ್ದಿ

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಬರ್ಬರ ಕೊಲೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಎಂದು ಗುರುತಿಸಲಾಗಿದ್ದು, ಪ್ರತಿಮಾ ಅವರು ಪತಿಯಿಂದ ವಿಚ್ಛೇದನ ಪಡೆದು ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಮಾ ಶನಿವಾರ ರಾತ್ರಿ 8 ಗಂಟೆಗೆ ಇಲಾಖೆಯ ವಾಹನದಲ್ಲಿ ಕಚೇರಿಯಿಂದ ಮನೆಗೆ ಬಂದಿದ್ದರು. ರಾತ್ರಿ ಅಣ್ಣ ಕರೆ ಮಾಡಿದಾಗ ಸ್ವೀಕರಿಸಿ ಮಾತನಾಡಿದ್ದರು. ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರತಿಮಾ ನೆಲೆಸಿದ್ದ ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.