Wednesday, January 22, 2025
ಸುದ್ದಿ

ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ : ಕಾರ್ಮಿಕ ಸಾವು – ಕಹಳೆ ನ್ಯೂಸ್

ಮಂಗಳೂರು : ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪವನ್ ಶ್ರವಣ್ ಸೇವಂತ್ ನತದೃಷ್ಟ ಯುವಕ. ಈತ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯಲು ಮುಂದಾಗಿದ್ದ.ಈ ವೇಳೆ ವಿದ್ಯುತ್ ತಂತಿಗೆ ರಾಡ್ ತಗಲಿದೆ. ತಕ್ಷಣ ಕರೆಂಟ್ ಶಾಕ್ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತ ಮಹಾರಾಷ್ಟ್ರ ಮೂಲದ ಕಾರ್ಮಿಕನಾಗಿದ್ದು ಕೆಲವು ಸಮಯಗಳಿಂದ ಇಲ್ಲಿ ಕೆಲಸ ಮಾಡಿಕೊಂಡಿದ್ದ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು